ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಸೆಪ್ಟೆಂಬರ್ 10ರಂದು ಚಿನ್ನದ ಬೆಲೆ ಏರಿಳಿತ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 10: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ನಿರ್ಬಂಧ ಮುಂದುವರೆದಿದೆ. ಸೆಪ್ಟೆಂಬರ್ 10ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತವಾಗಿದ್ದು, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನದ ದರ ದಿನದ ವಹಿವಾಟಿನ ಅಂತ್ಯಕ್ಕೆ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 46,973ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ತಗ್ಗಿ 64,150ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಏರಿಕೆಯಾಗಿ 1,796.20ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.18ರಷ್ಟು ಏರಿಕೆಯಾಗಿ 24.09 ಯುಎಸ್ ಡಾಲರ್ ಆಗಿದೆ.

ನಿರಂತರ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಏರಿಕೆ; ಸೆ.10ರ ಬೆಲೆ ಎಷ್ಟು?ನಿರಂತರ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಏರಿಕೆ; ಸೆ.10ರ ಬೆಲೆ ಎಷ್ಟು?

ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಶೇ 2.19ರಷ್ಟು ಏರಿಕೆ ಕಂಡು 38.34 ಡಾಲರ್ ಮೌಲ್ಯ ಹೆಚ್ಚಿಸಿಕೊಂಡಿದೆ. ಇದೇ ಅವಧಿಯಲ್ಲಿ ಬೆಳ್ಳಿ ದರ ಶೇ 1.90ರಷ್ಟು ಏರಿಕೆ ಕಂಡು 0.45 ಡಾಲರ್ ಮೌಲ್ಯ ಹೆಚ್ಚಿಸಿಕೊಂಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು, ಸೆ.9ರಂದು ಬೆಳಗ್ಗೆ ಎಂಸಿಎಕ್ಸ್ ನಲ್ಲಿ 118ರು ಕಳೆದುಕೊಂಡಿದ್ದ ಹಳದಿ ಲೋಹ ದಿನದ ಅಂತ್ಯಕ್ಕೆ ಚೇತರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ ಶೇ 0.39ರಷ್ಟು ಅಥವಾ 253 ರು ಕಳೆದುಕೊಂಡಿತ್ತು. ದಿನದ ಅಂತ್ಯಕ್ಕೂ ಚೇತರಿಕೆ ಕಾಣಲಿಲ್ಲ.

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100ರು ಏರಿಕೆಗೊಂಡು 44,100ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 110 ರು ಏರಿಕೆಯಾಗಿ ರು 48,110 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 68,500ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 64,200ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 10ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

Gold And Silver Rate slashed In Indias Major Cities On September 10, 2021
English summary
Gold, silver rate in India's major cities including Bengaluru, Chennai, Mumbai, Delhi on September 10, 2021: ಭಾರತದ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 10ನೇ ತಾರೀಕಿನ ಶುಕ್ರವಾರ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X