Infographics: ಸೆಪ್ಟೆಂಬರ್ 23ರಂದು ಚಿನ್ನದ ಬೆಲೆ ಎಷ್ಟಿದೆ?
ನವದೆಹಲಿ, ಸೆಪ್ಟೆಂಬರ್ 23: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ನಿರ್ಬಂಧ ಮುಂದುವರೆದಿದೆ. ಸೆಪ್ಟೆಂಬರ್ 23ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತವಾಗಿದ್ದು, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಚಿನ್ನದ ದರ ದಿನದ ವಹಿವಾಟಿನ ಅಂತ್ಯಕ್ಕೆ ಪ್ರತಿ 10 ಗ್ರಾಂಗೆ ಏರಿಕೆಯಾಗಿ 46,105ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 61,100ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.89ರಷ್ಟು ಇಳಿಕೆಯಾಗಿ 1,751.16 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.07ರಷ್ಟು ಏರಿಕೆಯಾಗಿ 22.70ಯುಎಸ್ ಡಾಲರ್ ಆಗಿದೆ.
ಕಳೆದ 30 ದಿನಗಳ ಹಿಂದೆ ಸ್ಪಾಟ್ ಗೋಲ್ಡ್ ಶೇ 1.37ರಷ್ಟು ಇಳಿಕೆ ಕಂಡು 24.62ಡಾಲರ್ ಮೌಲ್ಯ ಬದಲಾಗಿದೆ. ಇದೇ ಅವಧಿಯಲ್ಲಿ ಬೆಳ್ಳಿ ದರ ಶೇ 4.89ರಷ್ಟು ಇಳಿಕೆ ಕಂಡು 1.17 ಡಾಲರ್ ಮೌಲ್ಯ ವ್ಯತ್ಯಾಸ ಕಂಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು, ಸೆ.23ರಂದು ಬೆಳಗ್ಗೆ ಎಂಸಿಎಕ್ಸ್ ನಲ್ಲಿ 46,439 ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಸ್ವಲ್ಪ ಕುಸಿತ ಕಂಡಿದೆ. ಬೆಳ್ಳಿ ಆರಂಭದಲ್ಲಿ 60,616ರು ನಂತೆ ಆರಂಭವಾದರೂ ದಿನದ ಅಂತ್ಯಕ್ಕೆ ಕುಸಿದಿದೆ.
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 250ರು ಏರಿಕೆಯಾಗಿ 43,600 ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 280ರು ಏರಿಕೆಯಾಗಿ 47, 560ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 64,800ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 60, 600ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 23ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.
-
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications