Infographics: ಸೆಪ್ಟೆಂಬರ್ 24ರಂದು ಚಿನ್ನದ ದರ ಎಷ್ಟಿದೆ?

ನವದೆಹಲಿ, ಸೆಪ್ಟೆಂಬರ್ 24: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ನಿರ್ಬಂಧ ಮುಂದುವರೆದಿದೆ. ಸೆಪ್ಟೆಂಬರ್ 24ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತವಾಗಿದ್ದು, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನದ ದರ ದಿನದ ವಹಿವಾಟಿನ ಅಂತ್ಯಕ್ಕೆ ಪ್ರತಿ 10 ಗ್ರಾಂಗೆ ಏರಿಕೆಯಾಗಿ 46,029ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 60,148ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.42ರಷ್ಟು ಏರಿಕೆಯಾಗಿ 1,753.00 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.39ರಷ್ಟು ಏರಿಕೆಯಾಗಿ 22.48ಯುಎಸ್ ಡಾಲರ್ ಆಗಿದೆ.

ಕಳೆದ 30 ದಿನಗಳ ಹಿಂದೆ ಸ್ಪಾಟ್ ಗೋಲ್ಡ್ ಶೇ 2.67ರಷ್ಟು ಇಳಿಕೆ ಕಂಡು 47.82ಡಾಲರ್ ಮೌಲ್ಯ ಬದಲಾಗಿದೆ. ಇದೇ ಅವಧಿಯಲ್ಲಿ ಬೆಳ್ಳಿ ದರ ಶೇ 4.33ರಷ್ಟು ಇಳಿಕೆ ಕಂಡು 1.02 ಡಾಲರ್ ಮೌಲ್ಯ ವ್ಯತ್ಯಾಸ ಕಂಡಿದೆ.

Gold And Silver Rate slashed In Indias Major Cities On September 24, 2021

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು, ಸೆ.24ರಂದು ಬೆಳಗ್ಗೆ ಎಂಸಿಎಕ್ಸ್ ನಲ್ಲಿ 46,075 ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಸ್ವಲ್ಪ ಕುಸಿತ ಕಂಡಿದೆ. ಬೆಳ್ಳಿ ಆರಂಭದಲ್ಲಿ 60,743ರು ನಂತೆ ಆರಂಭವಾದರೂ ದಿನದ ಅಂತ್ಯಕ್ಕೆ ಕುಸಿದಿದೆ.

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 400ರು ಇಳಿಕೆಯಾಗಿ 43,600 ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 430ರು ಇಳಿಕೆಯಾಗಿ 47, 130ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 64,900ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 60, 600ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 24ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+