Infographics: ಸೆ.29ರಂದು ಚಿನ್ನದ ಬೆಲೆ ಕುಸಿತ, ಎಲ್ಲಿ? ಎಷ್ಟು?
ನವದೆಹಲಿ, ಸೆಪ್ಟೆಂಬರ್ 29: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ದಸರಾ ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ನಿರ್ಬಂಧ ಮುಂದುವರೆದಿದೆ. ಸೆಪ್ಟೆಂಬರ್ 29ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತವಾಗಿದ್ದು, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಚಿನ್ನದ ದರ ದಿನದ ವಹಿವಾಟಿನ ಅಂತ್ಯಕ್ಕೆ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 45,715ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಕುಗ್ಗಿ58,501ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.21ರಷ್ಟು ಇಳಿಕೆಯಾಗಿ 1,731.75 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 4.07ರಷ್ಟು ಇಳಿಕೆಯಾಗಿ 21.58ಯುಎಸ್ ಡಾಲರ್ ಆಗಿದೆ.
ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1828.10 ಡಾಲರ್ ಹಾಗೂ ಕನಿಷ್ಠ 1745.81 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 24.75 ಡಾಲರ್ ಹಾಗೂ ಕನಿಷ್ಠ 22.30 ಡಾಲರ್ ಮುಟ್ಟಿತ್ತು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್29ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು, ಸೆ.29ರಂದು ಬೆಳಗ್ಗೆ ಎಂಸಿಎಕ್ಸ್ ನಲ್ಲಿ 45,963ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಸ್ವಲ್ಪ ಕುಸಿತ ಕಂಡಿದೆ. ಬೆಳ್ಳಿ ಆರಂಭದಲ್ಲಿ 60,555ರು ನಂತೆ ಆರಂಭವಾದರೂ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ.

ಚಿನ್ನದ ಏರಿಳಿತಕ್ಕೆ ಕಾರಣ
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.
ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 43,200ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 47, 130ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 64,800ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 60, 450ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.












Click it and Unblock the Notifications