Infographics: ಡಿಸೆಂಬರ್11ರಂದು ಚಿನ್ನದ ದರ ಏರಿಕೆ
ನವದೆಹಲಿ, ಡಿಸೆಂಬರ್ 11: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡು ಹಲವು ತಿಂಗಳುಗಳು ಕಳೆದಿವೆ.
ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಡಿಸೆಂಬರ್ 11ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ ನಲ್ಲಿ ಡಿಸೆಂಬರ್ 11ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,189.00ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 61,179.00ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ +2ಇಳಿಕೆಯಾಗಿ 1,787ಯುಎಸ್ ಡಾಲರ್‌ನಷ್ಟಿದೆ.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಡಿಸೆಂಬರ್ 11 ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,200ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,860ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,860ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,120 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,410ರೂ. ಇದೆ. ಚೆನ್ನೈನಲ್ಲಿ45,380ರೂ. ಹಾಗೂ ಅಪರಂಜಿ49,500ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಚಿನ್ನದ ಮೌಲ್ಯ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ48,189ರು ನಂತೆ ಬಿಡ್ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಏರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 661,179ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಏರಿಳಿತಕ್ಕೆ ಕಾರಣ
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಲ್ಲಿ ಚಿನ್ನ ಹಾಗೂ ಬೆಳ್ಳಿ ಧಾರಣೆ ಎಷ್ಟಿದೆ?
ನಗರ: ಬೆಂಗಳೂರು
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಡಿಸೆಂಬರ್ 11:45,100ರೂ, 49,200 ರೂ
ಡಿಸೆಂಬರ್ 10:44,960 ರೂ, 49,030 ರೂ
ಡಿಸೆಂಬರ್ 09:44,950 ರೂ, 49,040 ರೂ (---)
ಡಿಸೆಂಬರ್ 08: 44,950 ರೂ, 49,040 ರೂ
ಡಿಸೆಂಬರ್ 07:45,760ರೂ (---), --48, 830 ರೂ (---)
ಡಿಸೆಂಬರ್ 06: 45,760ರೂ (---), --48, 830 ರೂ (---)
ಡಿಸೆಂಬರ್ 05: 45,760ರೂ (+10 ರು), --48, 830 ರೂ (+ 10 ರು)
ಡಿಸೆಂಬರ್ 4:44,750 ರೂ, 48,820 ರೂ
ಡಿಸೆಂಬರ್ 03:44,450 ರೂ, 48,490 ರೂ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.












Click it and Unblock the Notifications