Infographics: ನವೆಂಬರ್ 04 ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ದೇಶದ ಕೆಲವು ನಗರಗಳಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗಿದೆ, ಹಾಗೆಯೇ ಕೆಲವು ನಗರದಲ್ಲಿ ಬೆಲೆ ಸ್ಥಿರವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,550 ರೂ ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 48,600 ರೂ. ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,750 ರೂ. ಆಗಿದೆ, 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನ 47,750 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,700 ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 50,900 ರೂ. ಆಗಿದೆ.

ಬಂಗಾರದ ಬೆಲೆ ದೇಶದಲ್ಲಿ ಏರಿಕೆಯಾದಂತೆಬೆಳ್ಳಿ ದರ ಸಹ ದೇಶದಲ್ಲಿಇಳಿಕೆಯಾಗಿದೆ.. ನಿನ್ನೆ 1 ಕೆಜಿ ಬೆಳ್ಳಿಗೆ 64,400 ರೂ. ಇತ್ತು. ಇಂದು ಬರೋಬ್ಬರಿ 2, 300 ರೂ. ಕಡಿಮೆಯಾಗಿದೆ. 62,400 ರೂ. ಆಗಿದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 62, 400 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 67,600 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 62,400 ರೂ. ದರ ಇದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

Gold And Silver Rate Stable In Indias Major Cities On November 04, 2021

ಕೊರೊನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಆಭರಣಗಳ ಬಗ್ಗೆ ಮಾತನಾಡುವುದಾದರೆ, ಈ ಬಾರಿ ತಿಳಿ ಚಿನ್ನದ ಉತ್ಪನ್ನಗಳ ಮಾರಾಟದಲ್ಲಿ ಉತ್ಕರ್ಷ ಕಂಡುಬಂದಿದೆ. ಹಿಂದೂ ನಂಬಿಕೆಯ ಪ್ರಕಾರ, ಪಾತ್ರೆಗಳಿಗೆ ಅಮೂಲ್ಯವಾದ ಲೋಹಗಳನ್ನು ಖರೀದಿಸಲು ಧಂತೇರಸ್) ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ದೊಡ್ಡ ಹೂಡಿಕೆಗೆ ಹಣವಿಲ್ಲದವರೂ ತಿಳಿ ಚಿನ್ನದ ಮೇಲೆ ಹೂಡಿಕೆ ಮಾಡುವ ಮೂಲಕ ಸಂಪ್ರದಾಯವನ್ನು ಅನುಸರಿಸಿದ್ದಾರೆ.

ಸಿಎಐಟಿ ತನ್ನ ಹೇಳಿಕೆಯಲ್ಲಿ, 'ಧನ್ತೇರಸ್‌ನಲ್ಲಿ ದೇಶಾದ್ಯಂತ 75,000 ಕೋಟಿ ರೂಪಾಯಿ ಮೌಲ್ಯದ ಚಿನ್ನ(Gold)ವನ್ನು ಮಾರಾಟ ಮಾಡಲಾಗಿದೆ. ಸುಮಾರು 15 ಟನ್ ಚಿನ್ನಾಭರಣ ಮಾರಾಟವಾಗಿದೆ. ಇದರಲ್ಲಿ ದೆಹಲಿಯಲ್ಲಿ 1,000 ಕೋಟಿ, ಮಹಾರಾಷ್ಟ್ರದಲ್ಲಿ ಸುಮಾರು 1,500 ಕೋಟಿ, ಉತ್ತರ ಪ್ರದೇಶದಲ್ಲಿ ಸುಮಾರು 600 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮಾರಾಟವಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ವೇಳೆ ದಕ್ಷಿಣ ಭಾರತದಲ್ಲಿ ಸುಮಾರು 2000 ಕೋಟಿ ಮೌಲ್ಯದ ಬಂಗಾರದ ಬಂಪರ್ ಸೇಲ್ ಆಗಲಿದೆ ಎಂದು ಅಂದಾಜಿಸಲಾಗಿದೆ.

ವಾಸ್ತವವಾಗಿ, ಧಂತೇರಸ್ನಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸಲು ಹಿಂದೂ ಧರ್ಮದಲ್ಲಿ ನಂಬಿಕೆ ಇದೆ. ಅದೇ ಸಮಯದಲ್ಲಿ, ನೀವು ಮಾರುಕಟ್ಟೆಯನ್ನು ನೋಡಿದರೆ, ಈ ಬಾರಿ ಧನ್ತೇರಸ್ ದೀಪಾವಳಿಯ ಮೊದಲು ಮಾರುಕಟ್ಟೆಗಳಲ್ಲಿ ಉತ್ತಮವಾಗಿ ಪ್ರಾರಂಭವಾಯಿತು ಮತ್ತು ಕರೋನಾ ವೈರಸ್‌ನಿಂದ, ಮಾರುಕಟ್ಟೆಯ ಕಳೆದುಹೋದ ಹೊಳಪು ಮತ್ತೆ ಕಂಡುಬಂದಿದೆ. ಚಿನ್ನದ ಆಭರಣಗಳು ಮತ್ತು ನಾಣ್ಯಗಳ ಮಾರಾಟವು ಕೋವಿಡ್ ಪೂರ್ವದ ಮಟ್ಟವನ್ನು ತಲುಪಲಿದೆ.

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 62,500

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 62,500

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 62,500

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+