Infographics: ಡಿ.06ರಂದು ಚಿನ್ನದ ದರ ಸ್ಥಿರ

ನವದೆಹಲಿ, ಡಿಸೆಂಬರ್ 06: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡು ಹಲವು ತಿಂಗಳುಗಳು ಕಳೆದಿವೆ.

ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಡಿಸೆಂಬರ್ 06ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಡಿಸೆಂಬರ್ 06ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ತಗ್ಗಿ 47,940.00ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 61,400ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ +14 ರಷ್ಟು ಏರಿಕೆಯಾಗಿ 1,784.82 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.16ರಷ್ಟು ಏರಿಕೆಯಾಗಿ 22.55ಯುಎಸ್ ಡಾಲರ್ ಆಗಿದೆ.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಡಿಸೆಂಬರ್ 06 ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಚಿನ್ನದ ಮೌಲ್ಯ ಏರಿಳಿತ

ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 47,154ರು ನಂತೆ ಬಿಡ್ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಏರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 60,556ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಏರಿಳಿತಕ್ಕೆ ಕಾರಣ

ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಲ್ಲಿ ಚಿನ್ನ ಹಾಗೂ ಬೆಳ್ಳಿ ಧಾರಣೆ ಎಷ್ಟಿದೆ?

ಬೆಂಗಳೂರಲ್ಲಿ ಚಿನ್ನ ಹಾಗೂ ಬೆಳ್ಳಿ ಧಾರಣೆ ಎಷ್ಟಿದೆ?

ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ 45,760ರೂ (---)

24 ಕ್ಯಾರೆಟ್ ಚಿನ್ನ 48, 830 ರೂ (---)

ಬೆಳ್ಳಿ ದರ: 61,500 ರೂಪಾಯಿ

Recommended Video

    ವಿಭಿನ್ನವಾಗಿ ಶ್ರದ್ಧಾಂಜಲಿ ಹೇಳಿದ ವಾರ್ನರ್ | Oneindia Kannada
    ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

    ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

    ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+