Infographics: ಸೆಪ್ಟೆಂಬರ್ 11ರಂದು ಚಿನ್ನ, ಬೆಳ್ಳಿ ಬೆಲೆ ಇಳಿಕೆ...

ನವದೆಹಲಿ, ಸೆಪ್ಟೆಂಬರ್ 11: ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ನಿರಂತರ ಇಳಿಕೆಗೊಂಡಿದ್ದ ಚಿನ್ನದ ಬೆಲೆ ಗಣೇಶ ಹಬ್ಬದ ದಿನವಾದ ಶುಕ್ರವಾರ ಕೊಂಚ ಏರಿಕೆ ಕಂಡಿತ್ತು. ಇದೀಗ ಶನಿವಾರ ಮತ್ತೆ ಬೆಲೆ ಇಳಿಕೆಯಾಗಿದೆ.

ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿ ಸೆಪ್ಟೆಂಬರ್ 11ರಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.36% ರಷ್ಟು ಇಳಿಕೆಯಾಗಿ 1,787.78 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.26% ಆಗಿ 23.74 ಯುಎಸ್ ಡಾಲರ್ ಆಗಿದೆ.

ಬೆಳ್ಳಿ ಬೆಲೆ ಕೆಲವೆಡೆ ಇಳಿಕೆಯಾಗಿದ್ದರೆ, ಮತ್ತೆ ಕೆಲವೆಡೆ ಸ್ಥಿರತೆ ಕಾಯ್ದುಕೊಂಡಿದೆ. ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಶೇ 2.19ರಷ್ಟು ಏರಿಕೆ ಕಂಡು 38.34 ಡಾಲರ್ ಮೌಲ್ಯ ಹೆಚ್ಚಿಸಿಕೊಂಡಿದೆ. ಇದೇ ಅವಧಿಯಲ್ಲಿ ಬೆಳ್ಳಿ ದರ ಶೇ 1.90ರಷ್ಟು ಏರಿಕೆ ಕಂಡು 0.45 ಡಾಲರ್ ಮೌಲ್ಯ ಹೆಚ್ಚಿಸಿಕೊಂಡಿದೆ.

Infographics: Gold And Silver Rates In Indias Major Cities On September 11

ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆ ಇದ್ದೇ ಇದೆ. ಹೀಗಾಗ್ಯೂ ಸೆಪ್ಟೆಂಬರ್ ತಿಂಗಳಿನಲ್ಲಿ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿ ಸಾಗಿದೆ. ಹಬ್ಬದ ಋತುವಾದ್ದರಿಂದ ಗ್ರಾಹಕರಿಗೆ ಒಳ್ಳೆ ಅವಕಾಶವನ್ನೂ ಒದಗಿಸಿಕೊಟ್ಟಿದೆ.

ಶನಿವಾರ, ಸೆಪ್ಟೆಂಬರ್ 11ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 100 ರೂ ಇಳಿಕೆಯಾಗಿ 46,150 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 100ರೂ ಇಳಿಕೆಯಾಗಿ 50,350 ರೂ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರೂ ಇಳಿಕೆಗೊಂಡು 44,000 ರೂ ಹಾಗೂ ಅಪರಂಜಿ ಚಿನ್ನ 10 ಗ್ರಾಂಗೆ 110 ರೂ ಇಳಿಕೆಯಾಗಿ ರು 48,000 ರೂ ಆಗಿದೆ.

ಗಣೇಶ ಹಬ್ಬಕ್ಕೆ ಏರಿಕೆಯಾಗಿದ್ದ ಚಿನ್ನದ ಬೆಲೆ ಮಾರನೇ ದಿನವೇ ಮತ್ತೆ ಕುಸಿದಿದೆ. ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಸ್ಥಿರತೆ ಕಾಯ್ದುಕೊಂಡಿದ್ದು, ಕೆ.ಜಿ. ಬೆಳ್ಳಿಗೆ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾದಲ್ಲಿ 64,200 ರೂ, ಚೆನ್ನೈ, ಹೈದರಾಬಾದ್‌ನಲ್ಲಿ 68,000 ರೂ ಆಗಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 11ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಚಿತ್ರ ವಿನ್ಯಾಸ: ಭರತ್ ಎಚ್.ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+