ತಿಂಗಳ ಕೊನೆಯಲ್ಲಿ ಏರಿದ ಚಿನ್ನ, ಬೆಳ್ಳಿ ಬೆಲೆ; ಆಗಸ್ಟ್‌ 28ರ ದರ ಪಟ್ಟಿ ಇಲ್ಲಿದೆ...

ನವದೆಹಲಿ, ಆಗಸ್ಟ್‌ 28: ನಿರಂತರ ಇಳಿಕೆ ನಂತರ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಚೇತರಿಕೆ ಕಂಡಿದ್ದು, ತಿಂಗಳ ಅಂತ್ಯದಲ್ಲಿ ಬೆಲೆ ಏರಿಕೆ ಕಾಣುತ್ತಿದೆ.

ಆಗಸ್ಟ್‌ ಆರಂಭದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಕುಸಿತ ಕಂಡಿತ್ತು. ಹಬ್ಬಕ್ಕೆ ಚಿನ್ನ ಖರೀದಿ ಮಾಡುವವರಿಗೆ ಉತ್ತಮ ಅವಕಾಶ ಕಲ್ಪಿಸಿಕೊಟ್ಟಿತ್ತು. ಎರಡನೇ ವಾರದಲ್ಲಿ ವಹಿವಾಟು ಚೇತರಿಕೆ ಕಂಡು ಮತ್ತೆ ದ್ವಿತೀಯಾರ್ಧದಲ್ಲಿ ಬೆಲೆ ಇಳಿಕೆಯಾಗಿತ್ತು. ಇದೀಗ ತಿಂಗಳ ಕೊನೆಯಲ್ಲಿ ಮತ್ತೆ ಏರಿಕೆಯಾಗಿದೆ. ಆಗಸ್ಟ್‌ 28ರಂದು ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿ ಹಳದಿ ಲೋಹದ ಬೆಲೆ ಹೆಚ್ಚಾಗಿದೆ.

ಶನಿವಾರದ ಈ ಪರಿಷ್ಕೃತ ಬೆಲೆಯೊಂದಿಗೆ, ಆಗಸ್ಟ್ 28ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 150 ರೂ ಏರಿಕೆಯಾಗಿ 46,700 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 150 ರೂ ಏರಿಕೆಯಾಗಿ 50,930 ರೂ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 1.35% ರಷ್ಟು ಏರಿಕೆಯಾಗಿ 1,817.92 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.83%ರಷ್ಟು ಏರಿಕೆಯಾಗಿ 24.02 ಯುಎಸ್ ಡಾಲರ್ ಆಗಿದೆ.

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್‌ ಚಿನ್ನ 10 ಗ್ರಾಂಗೆ 150 ರೂ ಏರಿಕೆಯಾಗಿ 44,550 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 160 ರೂ ಏರಿಕೆಯಾಗಿ 48,600 ರೂ ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರವೂ ಏರಿಕೆಯಾಗಿದೆ. ದೆಹಲಿ, ಬೆಂಗಳೂರು, ಮುಂಬೈನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 63,800 ರೂಪಾಯಿ ಆಗಿದೆ. ಚೆನ್ನೈ, ಹೈದರಾಬಾದ್ ಹಾಗೂ ಕೋಲ್ಕತ್ತಾದಲ್ಲಿ 68,700 ರೂ ಆಗಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ,ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಆಗಸ್ಟ್ 28ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಚಿತ್ರ ವಿನ್ಯಾಸ: ಭರತ್ ಎಚ್.ಸಿ

Gold Infographics: Gold And Silver Rate In Indias Major Cities On August 28
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+