Infographics: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್ 4ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?
ನವದೆಹಲಿ, ಸೆಪ್ಟೆಂಬರ್ 4: ವಾರದಿಂದ ನಿರಂತರ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಏಕಾಏಕಿ ಏರಿಕೆ ಕಂಡಿದೆ. ಆಗಸ್ಟ್ ತಿಂಗಳ ಕೊನೆಯಲ್ಲಿ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿತ್ತು. ಸೆಪ್ಟೆಂಬರ್ ತಿಂಗಳಿನ ಮೊದಲ ಮೂರು ದಿನಗಳಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು. ಇದೀಗ ದಿಢೀರನೆ ಚಿನ್ನದ ಬೆಲೆ ಏರಿಕೆ ಕಂಡಿದೆ. ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿಯೂ ಚಿನ್ನದ ಬೆಲೆ ಏರಿಕೆಯಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್(1 ounce=28.3495 ಗ್ರಾಂ)ಗೆ ಶೇ 0.99% ರಷ್ಟು ಏರಿಕೆಯಾಗಿ 1,827.46 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 3.41%ರಷ್ಟು ಏರಿಕೆಯಾಗಿ 24.71 ಯುಎಸ್ ಡಾಲರ್ ಆಗಿದೆ.
ಶನಿವಾರ, ಸೆಪ್ಟೆಂಬರ್ 4ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 300 ರೂ ಏರಿಕೆಯಾಗಿ 46,650 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 320 ರೂ ಏರಿಕೆಯಾಗಿ 50,900 ರೂ ಆಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 300 ರೂ ಏರಿಕೆಯಾಗಿ 44,500 ರೂ ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 330 ರೂ ಏರಿಕೆಯಾಗಿ 48,550 ರೂ ಆಗಿದೆ.

ಬೆಳ್ಳಿ ದರದಲ್ಲಿಯೂ ಭಾರೀ ಏರಿಕೆಯಾಗಿದ್ದು, ಭಾರತದ ಪ್ರಮುಖ ನಗರಗಳಲ್ಲಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 69,600 ರೂ, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 65,200 ರೂ ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ,ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 4ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...
ಚಿತ್ರ ವಿನ್ಯಾಸ: ಭರತ್ ಎಚ್.ಸಿ.












Click it and Unblock the Notifications