• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Infographics: ಸೆಪ್ಟೆಂಬರ್ 18ರಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 18: ಆಗಸ್ಟ್‌ ಅಂತ್ಯದಿಂದ ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಇಳಿಮುಖವಾಗಿದ್ದ ಚಿನ್ನದ ಬೆಲೆ ಆನಂತರ ಸ್ಥಿರತೆ ಕಾಯ್ದುಕೊಂಡಿತ್ತು. ಸೆಪ್ಟೆಂಬರ್ 17ರಂದು ಏಕಾಏಕಿ ಭಾರೀ ಮಟ್ಟದಲ್ಲಿ ಬೆಲೆ ಕುಸಿತ ಕಂಡಿದ್ದು, ಇದೀಗ ಶನಿವಾರ ಭಾರತದ ಬಹುಪಾಲು ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಕುಸಿದಿದ್ದು, ಬೆಲೆ ಇಳಿಕೆ ನಿರಂತರವಾಗಿರುವುದು ತಿಳಿದುಬಂದಿದೆ. ಹಬ್ಬದ ಋತುವಾಗಿದ್ದರೂ ಚಿನ್ನದ ಖರೀದಿ ತಗ್ಗಿರುವುದು ಕಂಡುಬಂದಿದೆ.

ಶನಿವಾರ, ಸೆಪ್ಟೆಂಬರ್ 18ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 45,550 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 49,690 ರೂ ಆಗಿದೆ. ಬೆಂಗಳೂರು ನಗರದಲ್ಲಿ10 ಗ್ರಾಂ ಚಿನ್ನದ ಬೆಲೆ 43,400 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 47,350 ರೂ ಆಗಿದೆ.

ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಸೆಪ್ಟೆಂಬರ್ 18ರಂದು ಎಷ್ಟಾಗಿದೆ ಚಿನ್ನ?ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಸೆಪ್ಟೆಂಬರ್ 18ರಂದು ಎಷ್ಟಾಗಿದೆ ಚಿನ್ನ?

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.04ರಷ್ಟು ಏರಿಕೆಯಾಗಿ 1,754.86 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.36% ಇಳಿಕೆಯಾಗಿ 22.40 ಯುಎಸ್ ಡಾಲರ್ ಆಗಿದೆ.

ಹಲವು ಕಾರಣಗಳಿಂದಾಗಿ ದೇಶದಲ್ಲಿ ಚಿನ್ನದ ಬೆಲೆ ಕುಸಿತ ಕಾಣುತ್ತಿದೆ. ಕೊರೊನಾ ಸೋಂಕಿನ ಕಾರಣ ಹಲವೆಡೆ ಹೇರಿರುವ ನಿರ್ಬಂಧಗಳು, ದೇಶದಲ್ಲಿ ಕುಸಿತ ಕಂಡಿರುವ ಆರ್ಥಿಕತೆ, ಜನರ ಹಣಕಾಸಿನ ಸ್ಥಿತಿಗತಿ ಚಿನ್ನದ ವಹಿವಾಟಿನ ಮೇಲೆ ಪರಿಣಾಮ ಬೀರಿವೆ.

ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. 1 ಕೆ.ಜಿ.ಗೆ ಸೆಪ್ಟೆಂಬರ್ 18ರ ದರದಂತೆ: ಚೆನ್ನೈ 60,600, ಹೈದರಾಬಾದ್‌ನಲ್ಲಿ 65,900 ರೂ, ಮುಂಬೈ, ದೆಹಲಿ, ಬೆಂಗಳೂರು, ಕೋಲ್ಕತ್ತಾದಲ್ಲಿ 60,600 ರೂ ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ...

ಹಬ್ಬದ ಋತುವಿದ್ದರೂ ವಹಿವಾಟು ಕುಸಿತ:
ಹಬ್ಬದ ಋತುವಾಗಿದ್ದರೂ ಹಲವು ಕಾರಣಗಳಿಂದಾಗಿ ಚಿನ್ನದ ವಹಿವಾಟು ಚೇತರಿಸಿಕೊಂಡಿಲ್ಲ ಎಂದು ತಿಳಿದುಬಂದಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತಕ್ಕೆ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು. 30 ದಿನಗಳ ಹಿಂದೆ ಸ್ಪಾಟ್ ಗೋಲ್ಡ್ ಶೇ 0.36ರಷ್ಟು ಏರಿಕೆ ಕಂಡು 6.40 ಡಾಲರ್ ಮೌಲ್ಯ ಹೆಚ್ಚಿಸಿಕೊಂಡಿದೆ. ಇದೇ ಅವಧಿಯಲ್ಲಿ ಬೆಳ್ಳಿ ದರ ಶೇ 0.29ರಷ್ಟು ಇಳಿಕೆ ಕಂಡು 0.07 ಡಾಲರ್ ಮೌಲ್ಯ ವ್ಯತ್ಯಾಸ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಸೆ. 17ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಸೆ. 17ರಂದು ಎಷ್ಟಾಗಿದೆ 10 ಗ್ರಾಂ ಚಿನ್ನ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ.

ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 18ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಚಿತ್ರ ವಿನ್ಯಾಸ: ಭರತ್ ಎಚ್.ಸಿ.

English summary
Gold rates stable on september 18 at major indian cities. Here is infographics of gold rates...
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X