ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 10; ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಬೆಳ್ಳಿ ದರ...

|
Google Oneindia Kannada News

ನವದೆಹಲಿ, ಜುಲೈ 10: ಭಾರತದಲ್ಲಿ ಕೊರೊನಾ ಕಾರಣವಾಗಿ ಜೂನ್ ತಿಂಗಳಿಡೀ ಕುಸಿದಿದ್ದ ಚಿನ್ನದ ವಹಿವಾಟು ಜುಲೈ ತಿಂಗಳಿನಲ್ಲಿ ಮತ್ತೆ ಚೇತರಿಕೆ ಹಾದಿಯಲ್ಲಿದೆ. ಜುಲೈ ಆರಂಭದಿಂದಲೂ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ.

ಕಳೆದ ಹತ್ತು ದಿನಗಳಿಂದಲೂ ಚಿನ್ನದ ಬೆಲೆ ಏರು ಹಾದಿಯಲ್ಲಿ ಸಾಗುತ್ತಿದ್ದು, ಜುಲೈ 10ರ ಶನಿವಾರ ಸ್ಥಿರತೆ ಕಾಯ್ದುಕೊಂಡಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.25% ರಷ್ಟು ಏರಿಕೆಯಾಗಿ 1,808.54 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.68%ರಷ್ಟು ಏರಿಕೆಯಾಗಿ 26.10 ಯುಎಸ್ ಡಾಲರ್ ಆಗಿದೆ.

ಜುಲೈ 09: ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಜುಲೈ 09: ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ?

ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 44,750 ರೂಗೆ ತಲುಪಿದ್ದು, ಅಪರಂಜಿ ಚಿನ್ನದ ಬೆಲೆ 48,820 ರೂ ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆಯಲ್ಲಿ ಶನಿವಾರ ಏರಿಕೆ ಕಂಡುಬಂದಿದೆ. ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾದಲ್ಲಿ ಕೆ.ಜಿ ಬೆಳ್ಳಿಗೆ 69,300 ರೂ ಹಾಗೂ ಚೆನ್ನೈ, ಹೈದರಾಬಾದ್‌ನಲ್ಲಿ 74,100 ರೂ ಆಗಿದೆ.

Infographics: Gold Rates In Major Cities On July 10

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜುಲೈ 10ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

English summary
Infographics: The Gold Rates on Major Cities in India on Saturday (July 10),
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X