ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 29ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

|
Google Oneindia Kannada News

ಭಾರತೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ಬೆಲೆಯನ್ನು ಕೊಂಚ ಇಳಿಕೆ ಮಾಡಲಾಗಿದ್ದು, ಮೇ 29ರ ಶನಿವಾರ ಮತ್ತೆ ಬೆಲೆ ಏರಿಕೆಯಾಗಿದೆ.

ಕೆಲವು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಸ್ಥಿರವಾಗಿತ್ತು. ವಾರದ ನಂತರ ಮೇ 26ರಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. ಶುಕ್ರವಾರ ಇಳಿಕೆ ಮಾಡಿದ್ದು, ಇಂದು ಮತ್ತೊಮ್ಮೆ ಬೆಲೆ ಏರಿಕೆ ಮಾಡಲಾಗಿದೆ.

ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.33%ರಷ್ಟು ಏರಿಕೆಯಾಗಿ 1,904.30 ಯುಎಸ್ ಡಾಲರ್‌ನಷ್ಟಿದೆ.

ಮೇ 28ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?ಮೇ 28ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100ರೂ ಏರಿಕೆ ಕಂಡು 45,800 ರೂ ಹಾಗೂ ಅಪರಂಜಿ 10 ಗ್ರಾಂಗೆ 90 ರೂ ಏರಿಕೆಯಾಗಿ 49,950 ರೂ ನಷ್ಟಿದೆ. ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 29ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...

Infographics Gold Rates In Major Cities On May 29

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

English summary
Infographics: Price of Gold slashed on Major Cities in India on saturday (May 29),
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X