ಜೂನ್ 5ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮೇ ತಿಂಗಳಿನಲ್ಲಿ ಸಾಕಷ್ಟು ಏರಿಳಿತ ಕಂಡಿತ್ತು. ಜೂನ್ನಲ್ಲಿಯೂ ಏರಿಕೆ ಹಾದಿಯಲ್ಲಿರುವ ಚಿನ್ನದ ಬೆಲೆ ಜೂನ್ 4ರಂದು ಇಳಿಕೆಯಾಗಿತ್ತು. ಇದೀಗ ಶನಿವಾರ ಮತ್ತೆ ಬೆಲೆ ಕೊಂಚ ಏರಿಕೆಯಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.08%ರಷ್ಟು ಏರಿಕೆಯಾಗಿ 1,891.24 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.34ರಷ್ಟು ಏರಿಕೆಯಾಗಿ 27.80 ಯುಎಸ್ ಡಾಲರ್ ಆಗಿದೆ.
ಜೂನ್ 04ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 400 ರೂ ಏರಿಕೆ ಕಂಡು 45,900 ರೂ ಆಗಿದ್ದರೆ, ಅಪರಂಜಿ ಚಿನ್ನ 430 ರೂ ಏರಿಕೆ ಕಂಡು 50,070 ರೂ ಆಗಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 05ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...
ಚಿತ್ರ ವಿನ್ಯಾಸ: ಭರತ್ ಎಚ್. ಸಿ.