ಜುಲೈ 03: ಪ್ರಮುಖ ಪಟ್ಟಣಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ
ನವದೆಹಲಿ, ಜುಲೈ 03: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಜುಲೈ 03ರಂದು ಕೊಂಚ ಏರಿಕೆಯಾಗಿದೆ. ಜೂನ್ ತಿಂಗಳಿನಲ್ಲಿ ಕುಸಿತಗೊಂಡಿದ್ದ ಚಿನ್ನದ ವಹಿವಾಟು ಜುಲೈ ಆರಂಭದಲ್ಲಿ ಚೇತರಿಕೆಯಾಗಿದೆ.
ಶನಿವಾರ, ಜುಲೈ 3ರಂದು ಚಿನ್ನದ ಬೆಲೆ ಏರಿಕೆಯಾಗಿದ್ದು, ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 46,360ರೂಗೆ ತಲುಪಿದೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆ 50,370 ರೂಪಾಯಿ ಆಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್(1 ounce=28.3495 ಗ್ರಾಂ)ಗೆ ಶೇ 0.66% ರಷ್ಟು ಏರಿಕೆಯಾಗಿ 1,787.53 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.74%ರಷ್ಟು ಏರಿಕೆಯಾಗಿ 26.46 ಯುಎಸ್ ಡಾಲರ್ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಕಂಡುಬಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜುಲೈ 03ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...
ಚಿತ್ರ ವಿನ್ಯಾಸ: ಭರತ್ ಎಚ್. ಸಿ.












Click it and Unblock the Notifications