Get Updates
Get notified of breaking news, exclusive insights, and must-see stories!

ದೇಶದ ಪ್ರಮುಖ ನಗರಗಳಲ್ಲಿ ಜುಲೈ 17ರಂದು ಚಿನ್ನ, ಬೆಳ್ಳಿ ದರ ಎಷ್ಟಿದೆ?

ನವದೆಹಲಿ, ಜುಲೈ 17: ಜೂನ್ ತಿಂಗಳಿನಲ್ಲಿ ಕೊರೊನಾ ನಿರ್ಬಂಧಗಳ ಕಾರಣವಾಗಿ ಕುಸಿದಿದ್ದ ಚಿನ್ನದ ವಹಿವಾಟು ಜುಲೈ ತಿಂಗಳಿನಲ್ಲಿ ಚೇತರಿಕೆ ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಗಳಿಕೆ ಕಾಣುತ್ತಿದೆ. ಇದೀಗ ನಿರಂತರ ಏರಿಕೆ ನಂತರ ಜುಲೈ 17ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆ ದಾಖಲಿಸಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.94% ರಷ್ಟು ಇಳಿಕೆಯಾಗಿ 1,812.36 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.49%ರಷ್ಟು ಇಳಿಕೆಯಾಗಿ 25.67 ಯುಎಸ್ ಡಾಲರ್ ಆಗಿದೆ.

ಶನಿವಾರದ ಈ ಪರಿಷ್ಕೃತ ಬೆಲೆಯೊಂದಿಗೆ, ಜುಲೈ 17ರಂದು ದೇಶದ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 250 ರೂ ಇಳಿಕೆಯಾಗಿ 47,150 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 260 ರೂ ಇಳಿಕೆಯಾಗಿ 51,440 ರೂ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 250ರೂ ಇಳಿಕೆಯಾಗಿ 45,000 ರೂ ಹಾಗೂ ಅಪರಂಜಿ 10 ಗ್ರಾಂಗೆ 360 ರೂ ಇಳಿಕೆಯಾಗಿ 49,010ರೂ ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರವೂ ಇಳಿಕೆಯಾಗಿದ್ದು, 1. ಕೆ.ಜಿಗೆ: ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತಾದಲ್ಲಿ 68,400 ರೂ ಆಗಿದ್ದರೆ, ಚೆನ್ನೈ, ಹೈದರಾಬಾದ್‌ನಲ್ಲಿ 73,200 ರೂ ಆಗಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

Infographics: Gold Rates on Major Cities Today July 17

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜುಲೈ 17ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...

ಚಿತ್ರ ವಿನ್ಯಾಸ: ಭರತ್ ಎಚ್.ಸಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+