Get Updates
Get notified of breaking news, exclusive insights, and must-see stories!

ಜೂನ್ 07ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟು?

ಭಾರತೀಯ ಮಾರುಕಟ್ಟೆಯಲ್ಲಿ ಕೋವಿಡ್ ನಿರ್ಬಂಧದಿಂದ ಅಂಗಡಿ ಮಳಿಗೆಗಳು ಬಂದ್ ಆಗಿದ್ದು, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣುತ್ತಿದೆ. ಜೂನ್ 07ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಏರಿಕೆ ಕಂಡು 49,041ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಏರಿ 71, 647 ರು ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.16ರಷ್ಟು ಏರಿಕೆಯಾಗಿ 1,892.51 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.31ರಷ್ಟು ಏರಿಕೆಯಾಗಿ 27.85ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 110ರು ಇಳಿಕೆ ಕಂಡು 45,800ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 110ಇಳಿಕೆಯಾಗಿ 49,970ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ ನಲ್ಲಿ75,800ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 71,000ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Infographics: Gold Rates on Major Cities Today June 07

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 07ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+