ಜೂನ್ 11ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?
ಭಾರತೀಯ ಮಾರುಕಟ್ಟೆಯಲ್ಲಿ ಕೋವಿಡ್ ನಿರ್ಬಂಧದಿಂದ ಅಂಗಡಿ ಮಳಿಗೆಗಳು ಬಂದ್ ಆಗಿದ್ದು, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣುತ್ತಿದೆ. ಜೂನ್ 11ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 49,095.00ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 72, 434.00 ರು ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.60ರಷ್ಟು ಏರಿಕೆಯಾಗಿ 1,886.22 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.44ರಷ್ಟು ಏರಿಕೆಯಾಗಿ 28.07ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 300 ರು ಏರಿಕೆ ಕಂಡು 46,100ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 330 ರು ಏರಿಕೆಯಾಗಿ 50,300 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ77,300ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 72,400ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 11ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.
-
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್ಜಿ, ಪಿಎನ್ಜಿ ದರ ಸ್ಥಿರ: ಅದಾನಿ ಗ್ಯಾಸ್ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications