ಜೂನ್ 14ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?
ಭಾರತೀಯ ಮಾರುಕಟ್ಟೆಯಲ್ಲಿ ಕೋವಿಡ್ ನಿರ್ಬಂಧದಿಂದ ಅಂಗಡಿ ಮಳಿಗೆಗಳು ಬಂದ್ ಆಗಿದ್ದು, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣುತ್ತಿತತು, ಈಗ ದೇಶದ ಹಲವೆಡೆ ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಜೂನ್ 14ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 48618.00 ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ತಗ್ಗಿ 71967.00 ರು ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.41ರಷ್ಟು ಇಳಿಕೆಯಾಗಿ 1,865.94 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.38ರಷ್ಟು ಏರಿಕೆಯಾಗಿ 27.94 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 240 ರು ಇಳಿಕೆ ಕಂಡು 45,500ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 250 ರು ಇಳಿಕೆಯಾಗಿ 49, 640 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ನಲ್ಲಿ76,500ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 71,900ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 14ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications