ಜೂನ್ 19ರಂದು ಚಿನ್ನದ ದರ ಎಷ್ಟು ಏರಿದೆ? ಇಲ್ಲಿದೆ ಸಚಿತ್ರ ಮಾಹಿತಿ...
ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ನಿರ್ಬಂಧಗಳ ಕಾರಣ ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ವಹಿವಾಟು ತಗ್ಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಾಣುತ್ತಿದೆ. ಜೂನ್ ತಿಂಗಳಿನಲ್ಲಿ ಚಿನ್ನದ ಬೆಲೆ ಸಾಕಷ್ಟು ಏರಿಳಿತಗಳನ್ನು ಕಂಡಿದ್ದು, ತಿಂಗಳಿನ ಮಧ್ಯಭಾಗದಿಂದ ಬೆಲೆ ಇಳಿಕೆಯಾಗಿದೆ.
ಶುಕ್ರವಾರ ಅಧಿಕ ಮಟ್ಟದಲ್ಲಿ ಚಿನ್ನದ ಬೆಲೆ ತಗ್ಗಿದ್ದು, ಜೂನ್ 19ರಂದು ಕೂಡ ಚಿನ್ನ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ 0.70%ರಷ್ಟು ಇಳಿಕೆಯಾಗಿ 1,764.31 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.83%ರಷ್ಟು ಇಳಿಕೆಯಾಗಿ 25.80 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 250 ರೂ ಇಳಿಕೆ ಕಂಡು 44,000 ರೂ ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 270 ರೂ ಇಳಿಕೆಯಾಗಿ 48,000 ರೂಗೆ ತಲುಪಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರದಲ್ಲಿಯೂ ಸಾಕಷ್ಟು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಕೆ.ಜಿ. ಬೆಳ್ಳಿಗೆ 67,600 ರೂ, ದೆಹಲಿಯಲ್ಲಿ 67,600 ರೂ, ಚೆನ್ನೈನಲ್ಲಿ 73,100 ರೂ, ಮುಂಬೈನಲ್ಲಿ 67,600 ರೂ, ಹೈದರಾಬಾದ್‌ನಲ್ಲಿ 73,100 ರೂ, ಕೋಲ್ಕತ್ತಾದಲ್ಲಿ 67,600 ರೂ ಆಗಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 19ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ..
ಚಿತ್ರ ವಿನ್ಯಾಸ: ಭರತ್ ಎಚ್. ಸಿ.












Click it and Unblock the Notifications