ಮೇ 1ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ
ಮೇ 1ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏಪ್ರಿಲ್ ತಿಂಗಳಲ್ಲಿ ಸತತವಾಗಿ ಏರಿಳಿತ ಕಂಡಿದೆ. ಮೊದಲ ತ್ರೈಮಾಸಿಕದ ಒಟ್ಟು ಜಾಗತಿಕ ಚಿನ್ನದ ಬೇಡಿಕೆ 815.7 ಟನ್‌ಗಳಷ್ಟಿತ್ತು. ನಂತರ ಚಿನ್ನದ ಬೆಂಬಲಿತ ಇಟಿಎಫ್‌ಗಳು 177.9 ಟನ್ ಹೊರಹರಿವಿನ ಕಾರಣದಿಂದ ವರ್ಷದಿಂದ ವರ್ಷಕ್ಕೆ ಗಮನಾರ್ಹ ಕುಸಿತ (23%) ಕಂಡಿದೆ. ಸತತ 7 ದಿನಗಳ ಕಾಲ ಚಿನ್ನದ ಬೆಲೆ ಕುಸಿತ ಕಂಡಿದ್ದು, ಒಟ್ಟಾರೆ, 10,000ರುಗೂ ಅಧಿಕ ಮೊತ್ತ ಕಳೆದುಕೊಂಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಂದು, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ಗೆ ಶೇ 0.13ರಷ್ಟು ಇಳಿಕೆ ಕಂಡು 1,768.91 ಯುಎಸ್ ಡಾಲರ್‌ನಷ್ಟಿತ್ತು. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.60ರಷ್ಟು ಏರಿಕೆ ಕಂಡು 25.91ಯುಎಸ್ ಡಾಲರ್ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,370 ರು ಹಾಗೂ ಅಪರಂಜಿ 49,570 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ: ಬೆಂಗಳೂರು, ದೆಹಲಿ, ಮುಂಬೈನಲ್ಲಿ ಪ್ರತಿ 1 ಕೆ.ಜಿಗೆ 67,500 ರು ಇದ್ದರೆ, ಚೆನ್ನೈ, ಹೈದರಾಬಾದ್ ಹಾಗೂ ಇತರೆಡೆ ಪ್ರತಿ ಕೆಜಿಗೆ 74,000 ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ? ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 1ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications