• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 3ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ

|

ಮೇ 3ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏಪ್ರಿಲ್ ತಿಂಗಳಲ್ಲಿ ಸತತವಾಗಿ ಏರಿಳಿತ ಕಂಡಿದೆ. ಮೊದಲ ತ್ರೈಮಾಸಿಕದ ಒಟ್ಟು ಜಾಗತಿಕ ಚಿನ್ನದ ಬೇಡಿಕೆ 815.7 ಟನ್‌ಗಳಷ್ಟಿತ್ತು. ನಂತರ ಚಿನ್ನದ ಬೆಂಬಲಿತ ಇಟಿಎಫ್‌ಗಳು 177.9 ಟನ್‌ ಹೊರಹರಿವಿನ ಕಾರಣದಿಂದ ವರ್ಷದಿಂದ ವರ್ಷಕ್ಕೆ ಗಮನಾರ್ಹ ಕುಸಿತ (23%) ಕಂಡಿದೆ. ಚೀನಾದಲ್ಲಿ ಚಿನ್ನದ ಬೇಡಿಕೆ ಮೊದಲ ಮೂರು ತಿಂಗಳಲ್ಲಿ ಶೇ 93.9 ರಷ್ಟು ಏರಿಕೆ ಕಂಡಿದೆ.

ಭಾರತದಲ್ಲಿನ ಕೋವಿಡ್ 19 ಪರಿಸ್ಥಿತಿ, ಡಾಲರ್ ಬೆಲೆ ಸ್ಥಿರವಾಗಿರುವುದು ಎಲ್ಲದರ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಂದು, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ಗೆ ಶೇ 1.17ರಷ್ಟು ಏರಿಕೆ ಕಂಡು 1,791.97 ಯುಎಸ್ ಡಾಲರ್‌ನಷ್ಟಿತ್ತು. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.95ರಷ್ಟು ಏರಿಕೆ ಕಂಡು 25.58ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಮೇ 3ರ ದರ ಎಷ್ಟಿದೆ?

ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ಬೆಲೆ 200 ರು ಏರಿಕೆ ಕಂಡು 45,570 ರು ಹಾಗೂ ಅಪರಂಜಿ 49,770 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ: ಬೆಂಗಳೂರು, ದೆಹಲಿ, ಕೋಲ್ಕತಾ, ಮುಂಬೈನಲ್ಲಿ ಪ್ರತಿ 1 ಕೆ.ಜಿಗೆ 67,500 ರು ಇದ್ದರೆ, ಚೆನ್ನೈ, ಹೈದರಾಬಾದ್ ಹಾಗೂ ಇತರೆಡೆ ಪ್ರತಿ ಕೆಜಿಗೆ 73,500 ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ? ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 1ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

      ಮಹಿಳೆಯರನ್ನ CM ಮನೆಯಿಂದ ಹೊರಹಾಕಿದ ಸಿಬ್ಬಂದಿ | Oneindia Kannada

      English summary
      Infographics: The price of Gold Rates slashed on Major Cities in India on Monday (May 03).
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X