Infographics: ಕರ್ನಾಟಕದ ಕೆಲವೆಡೆ ಮಾತ್ರ ಉತ್ತಮ ಮಳೆ ಮುನ್ಸೂಚನೆ
ಬೆಂಗಳೂರು, ಜುಲೈ 26: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗುವ ಲಕ್ಷಣಗಳು ಕಾಣುತ್ತಿವೆ. ಕರಾವಳಿಯಲ್ಲಿ ಮಳೆಯಾಗುವ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ಸಹ ಮಲೆನಾಡು ಹಾಗೂ ಉತ್ತರ ಒಳನಾಡಿನ ಭಾಗದ ಜಿಲ್ಲೆಗಳ ಹಲವೆಡೆ ಸಾಧಾರಣದಿಂದ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿಯ ಹಾಗೂ ದಕ್ಷಿಣ ಒಳನಾಡಿನಲ್ಲಿ ಕಳೆದ 24ಗಂಟೆಗಳಲ್ಲಿ ಮಳೆ ದುರ್ಬಲವಾಗಿದೆ. ನಿರೀಕ್ಷಿತ ಪ್ರಮಾಣದ ಮಳೆ ದಾಖಲಾಗಿಲ್ಲ. ಉತ್ತರ ಒಳನಾಡಿನ ಹಲವು ಪ್ರದೇಶಗಲ್ಲಿ ಸಾಮಾನ್ಯದಿಂದ ಉತ್ತಮ ಮಳೆ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಹಗುರ ಮಳೆ ದಾಖಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಬಿದ್ದ ಬಗ್ಗೆ ವರದಿ ಆಗಿಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಸಾಮಾನ್ಯವಾಗಿ ಮಳೆ ಬಿದ್ದಿದೆ. ಹಲವು ಕಡೆಗಳಲ್ಲಿ ಇಡಿ ದಿನ ಮೋಡ ಕವಿದ ವಾತಾವರಣವೇ ಕಂಡು ಬಂದಿದೆ. ಇದೇ ಭಾಗದಲ್ಲಿ ಮುಂದಿನ ಎರಡು ದಿನ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆ ಇದೆ ಎಂದು ಮನ್ಸೂಚನೆ ನೀಡಲಾಗಿದೆ.

ಮುಂದಿನ 48ಗಂಟೆಯ ಬೆಂಗಳೂರಿನ ಮುನ್ಸೂಚನೆ
ಬೆಂಗಳೂರಿನಲ್ಲಿ ಸಹ ಮುಂಗಾರಿನ ಅಬ್ಬರ ಇಲ್ಲದಾಗಿದೆ. ಮಳೆ ಕಡಿಮೆ ಆಗಿದ್ದು ಮೋಡ ಕವಿದ ವಾತಾವಣ ಕಂಡು ಬಂದಿದೆ. ಮುಂದಿನ 48ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹಳಷ್ಟು ಮಳೆ ಆಗುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ 24ಗಂಟೆಯಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಗಿದೆ. ಇದರ ಹೊರತು ನಗರದಲ್ಲಿ ಯಾವುದೇ ಗಂಭೀರ ರೂಪದ ಬದಲಾವಣೆಗಳು ಇಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಉ.ಕ, ಮಲೆನಾಡು ಭಾಗದಲ್ಲಿ ಮಳೆ ನಿರೀಕ್ಷೆ
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ದುರ್ಬಲವಾಗಿದೆ. ಈ ಭಾಗದಲ್ಲಿ ಮಳೆ ಮುನ್ಸೂಚನೆ ಸದ್ಯಕ್ಕೆ ಇಲ್ಲ. ಆದರೆ ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ (ಜುಲೈ28)ರವರೆಗೆ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಇದರ ಜತೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಗಳಲ್ಲಿ ಸಹ ಜುಲೈ 27ರಂದು ಒಂದು ದಿನ ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. ಇದರ ಹೊರತು ಬೇರಾವುದೇ ಬದಲಾವಣೆಗಳು ಕಂಡು ಬಂದಿಲ್ಲ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 2ದಿನ ಹಗುರ ಮಳೆ
ಕರಾವಳಿಯಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ತುಂತುರು ಇಲ್ಲವೇ ಸಾಮಾನ್ಯ ಮಳೆ ಆಗಬಹುದು. ಮಳೆ ದುರ್ಬಲಗೊಂಡಿದ್ದರಿಂದ ಈ ಭಾಗದ ಸಮುದ್ರ ತೀರದಲ್ಲಿ ಗಾಳಿಯ ವೇಗ ಸಾಮಾನ್ಯವಾಗಿರಲಿದೆ. ಕಳೆದ 24ಗಂಟೆಯಲ್ಲಿ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆ ಸೇರಿದಂತೆ ಮೈಸೂರು ಕೆಲವೆಡೆ ಸಹಿತ ಉತ್ತಮ ಮಳೆ ದಾಖಲಾಗಿದೆ. ಇಲ್ಲಿ ಎರಡು ದಿನ ಇದೇ ವಾತಾವರಣ ಮುಂದುವರಿಯಲಿದೆ. ಉಳಿದಂತೆ ಹವಾಮಾನದಲ್ಲಿ ಗಂಭೀರ ರೂಪದ ಬದಲಾಣೆಗಳು ಇಲ್ಲ ಎಂದು ತಿಳಿಸಲಾಗಿದೆ.

ಕರ್ನಾಟಕದಲ್ಲಿ ದಾಖಲಾದ ತಾಪಮಾನದ ವಿವರ
ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ತೇವಾಂಶ 62ರಷ್ಟು ದಾಖಲಾಗಿದೆ. ಇನ್ನು ಗಾಳಿಯ ವೇಗ ಗಂಟೆಗೆ 37 ಕಿ.ಮೀ ಕಂಡು ಬಂದಿದೆ. ಬಾಗಲಕೋಟೆ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ ದಾಖಲಾಗಿದೆ. ರಾಯಚೂರಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 49ರಷ್ಟು ತೇವಾಂಶ, ಚಿತ್ರದುರ್ಗ 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 56ರಷ್ಟು ತೇವಾಂಶ, ಕಲಬುರಗಿಯಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 61ರಷ್ಟು ತೇವಾಂಶ, ಚಿಕ್ಕಮಗಳೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ ಕಂಡು ಬಂದಿದೆ.
ಇನ್ನು ಮಂಗಳೂರಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 53ರಷ್ಟು ತೇವಾಂಶ ಇದೆ. ಶಿವಮೊಗ್ಗದಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 54ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ತೇವಾಂಶ 53 ಇದ್ದು, ಬಳ್ಳಾರಿಯಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 56ರಷ್ಟು ತೇವಾಂಶ ದಾಖಲಾಗಿದೆ ಎಂದು ತಿಳಿದು ಬಂದಿದೆ.











Click it and Unblock the Notifications