Infographics: ಕರ್ನಾಟಕದ ವಿವಿಧ ಜಿಲ್ಲೆಳಲ್ಲಿ ಭಾರೀ ಮಳೆ ನಿರೀಕ್ಷೆ
ಬೆಂಗಳೂರು, ಜುಲೈ 15: ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಮುಂದಿನ ಐದು ದಿನ ಮುಂದುವರಿಯಲಿದೆ. ಇದರಲ್ಲಿ ಕರಾವಳಿ ಮತ್ತು ಮಲೆನಾಡಿನ ವಿವಿಧೆಡೆ ಮಾತ್ರ ಜುಲೈ 17ರವರೆಗೆ ಭಾರಿಯಿಂದ ಅತೀ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಂತರ ಜುಲೈ 20ರವರೆಗೆ ಇವೆರಡು ಭಾಗದ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ನಿರೀಕ್ಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಭಾರೀ ಮಳೆ ಬರುವ ಸಾಧ್ಯತೆ ಇದೆ. ಮುಂದಿನ ಮೂರು ದಿನ (ಜು.18) ಬೆಳಗಾವಿಗೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಆಗುವ ಹಿನ್ನೆಲೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ.

ಸಿಲಿಕಾನ್ ಸಿಟಿಯ ಹವಾಮಾನ ಮುನ್ಸೂಚನೆ
ಬೆಂಗಳೂರು ನಗರದಲ್ಲಿ ಜಿಟಿ ಜಿಟಿ ಮಳೆ ಮತ್ತೆ ಮುಂದುವರಿದಿದೆ. ಸಾಮಾನ್ಯವಾಗಿ ಮೋಡ ಕವಿದ ಹಾಗೂ ಚಳಿಯ ವಾತಾವರಣ ನಿರ್ಮಾಣವಾಗಿದೆ. ಉಳಿದಂತೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ ಐದು(ಜುಲೈ 20) ದಿನವು ಸಹ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಕೆಲವು ಕಡೆಗಳಲ್ಲಿ ಆಗಾಗ ತುಂತುರು ಮಳೆ ಆಗಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಇನ್ನು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಹಲವೆಡೆ ಭಾರೀ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಾಳಿಯ ವೇಗ 45-55ಕಿ.ಮೀ.
ಮುಂದಿನ ಎರಡು ದಿನ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರಿನ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಶನಿವಾರ ಮಾತ್ರ ಅತೀ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿಯಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಇದರ ಹೊರತು ಯಾವ ಭಾಗದಲ್ಲೂ ಗಮನಾರ್ಹ ಬದಲಾಣೆಗಳು ಇಲ್ಲ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 40-50 ಕಿಲೋ ಮೀಟರ್ ಇರಲಿದ್ದು, ಅದು ಸುಮಾರು 60ಕಿ.ಮೀ.ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 69ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 64 ಕಿ.ಮೀ ಆಗಿದೆ. ಬಾಗಲಕೋಟೆ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 77ರಷ್ಟು ತೇವಾಂಶ, ಮಂಗಳೂರಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 71ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 74ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57 ತೇವಾಂಶ, ಬಳ್ಳಾರಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 45ರಷ್ಟು ತೇವಾಂಶ, ಚಿತ್ರದುರ್ಗ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 62ರಷ್ಟು ತೇವಾಂಶ, ಕಲಬುರಗಿ 31ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ, ಚಿಕ್ಕಮಗಳೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications