ಹವಾಮಾನ ವರದಿ: ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಮಳೆ
ಬೆಂಗಳೂರು, ಜೂನ್ 26: ರಾಜ್ಯದಲ್ಲಿ ಮುಂದಿನ ಮೂರು ದಿನ ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಗುರುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರಿಂದ 30ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.

ಜೂನ್ 28ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಜೂನ್ 28ರವರೆಗೆ ಸಾಧಾರಣ ಮಳೆಯಾಗಲಿದೆ. ಗುರುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರಿಂದ 30ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟಷ್ಟು ಉಷ್ಣಾಂಶ ದಾಖಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ: ವಿನ್ಯಾಸ- ಭರತ್ ಎಚ್‌ಸಿ












Click it and Unblock the Notifications