Infographics: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಜುಲೈ 13: ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಜು.18ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ರಾಜ್ಯ ಹವಮಾನ ಇಲಾಖೆಯು ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರದ ಕೆಲವೆಡೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಆಗಾಗ ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಸಾಧಾರಣದಿಂದ ಭಾರೀ ಮಳೆ ಆಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಅದೇ ರೀತಿ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿಯ ಹವಾಮಾನ ಮುನ್ಸೂಚನೆ

ಸಿಲಿಕಾನ್ ಸಿಟಿಯ ಹವಾಮಾನ ಮುನ್ಸೂಚನೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಹಾಗೂ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ ಐದು ದಿನವು ಸಹ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಆಗಾಗ ಸಾಮಾನ್ಯದಿಂದ ಹಗುರವಾಗಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಮುಂದಿನ 24 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಂದೆರೆಡು ಕಡೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ, ಹಾಸನ ಒಂದೆರಡು ಕಡೆ ಬಾರಿಯಿಂದ ಅತಿ ಭಾರೀ ಮಳೆ ಆಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣದಿಂದ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆ ಆಗಲಿದ್ದು, 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನದಲ್ಲಿ ಕೆಲವೆಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 45-55 ಕಿಲೋ ಮೀಟರ್ ಇರಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 83ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 79 ಕಿ.ಮೀ ಇದೆ. ಬಾಗಲಕೋಟೆ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76ರಷ್ಟು ತೇವಾಂಶ, ಮಂಗಳೂರಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 85ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 77ರಷ್ಟು ತೇವಾಂಶ ಇದೆ. ಮೈಸೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60 ತೇವಾಂಶ, ಬಳ್ಳಾರಿಯಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 56 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 81ರಷ್ಟು ತೇವಾಂಶ, ಚಿತ್ರದುರ್ಗ 26ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 73ರಷ್ಟು ತೇವಾಂಶ, ಕಲಬುರಗಿ 26ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 79ರಷ್ಟು ತೇವಾಂಶ, ಚಿಕ್ಕಮಗಳೂರು 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 83ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+