Infographics:ಕರ್ನಾಟಕದ ದಕ್ಷಿಣ ಒಳನಾಡಿಗೆ ಅಬ್ಬರದ ಮಳೆ ನಿರೀಕ್ಷೆ
ಬೆಂಗಳೂರು, ಅಕ್ಟೋಬರ್ 13: ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಲಕ್ಷಣಗಳು ಕಂಡು ಬಂದಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವೆಡೆ ಮಳೆ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಒಂದು ಭಾಗದಲ್ಲಿ ಎರಡರಿಂದ ಮೂರು ದಿನ ಸುರಿದರೆ ಮರು ದಿನದಿಂದ ಮತ್ತೆ ಬೇರೆ ಭಾಗದ ಜಿಲ್ಲೆಗಳಲ್ಲಿ ಅಬ್ಬರ ಶುರು ವಿಟ್ಟುಕೊಳ್ಳುತ್ತಿದೆ. ಕಳೆದ ವಾರ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಜೋರು ದಾಖಲಾಗಿತ್ತು. ನಂತರ ಉತ್ತರ ಒಳನಾಡು ಜಿಲ್ಲೆಗಳು, ಇದೀಗ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಆಗುವ ಸಂಭವವಿದೆ.
ಒಟ್ಟು ಮೂರು ದಿನ (ಅ.16) ಪೈಕಿ ಮೊದಲ ದಿನ ಶುಕ್ರವಾರದಂದು ಮಾತ್ರ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಆಗಲಿದೆ. ಹೀಗಾಗಿ ಇಲ್ಲಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದರ ಹೊರತು ಈ ಭಾಗದಲ್ಲಿ ಗಂಭೀರ ಬದಲಾವಣೆಗಳು ಇಲ್ಲ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇತರ ರಾಜ್ಯಕ್ಕಿಂತ ಕರ್ನಾಟಕದಲ್ಲೇ ಅಧಿಕ ಮಳೆ ನಿರೀಕ್ಷೆ
ದೇಶದ ಇತರ ರಾಜ್ಯಗಳಲ್ಲಿ ಮಳೆ ಅಬ್ಬರ ಕಡಿಮೆ ಇದೆ. ಬೇರೆ ರಾಜ್ಯಗಳಿಗಿಂತ ಕರ್ನಾಟದಲ್ಲೇ ಮುಂದಿನ ಮೂರು ದಿನ ಸಾಧಾರಣದಿಂದ ಅತ್ಯಧಿಕ ಮಳೆ ಬರುವ ಮುನ್ಸೂಚನೆ ದೊರೆತಿದೆ. ಅಂಡಮಾನ್ ನಿಕೋಬಾರ್, ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಝಾರ್ಖಂಡ, ಮಹಾರಾಷ್ಟ್ರ, ಛತ್ತಿಸ್‌ಗರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಹಲವೆ ಸಾಧಾರಣವಾಗಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಯೆಲ್ಲೋ ಅಲರ್ಟ್ ಪಡೆದ ಜಿಲ್ಲೆಗಳೆಷ್ಟು?
ರಾಜ್ಯದ ದಕ್ಷಿಣ ಒಳನಾಡಿನ ಬಹತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಈ ಭಾಗದದಲ್ಲಿ ಅಕ್ಟೋಬರ್ 16ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆ ಅಬ್ಬರಿಸಲಿದೆ. ಈ ಕಾರಣಕ್ಕೆ ಇಷ್ಟು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

3ದಿನ ಬೆಂಗಳೂರಿನ ಜೋರು ಮಳೆ ಮುನ್ಸೂಚನೆ
ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಜೋರು ಮಳೆ ಸುರಿಯಲಿದ್ದು, ಈ ಪೈಕಿ ಶುಕ್ರವಾರ ಒಂದು ದಿನ ಹಳದಿ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ಸಾಧಾರಣವಾಗಿ ಮಳೆ ಆಗಲಿದೆ. ತಾಪಮಾನ ಕಡಿಮೆ ದಾಖಲಾಗುವ ಹಿನ್ನೆಲೆ ಎಲ್ಲೆಡೆ ಚಳಿಯ ವಾತಾವರಣವೇ ಕಂಡು ಬರಲಿದೆ. ಈ ಮೂರುದಿನ ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ವಿವಿಧ ಜಿಲ್ಲೆಗಳ ಉಷ್ಣಾಂಶ, ತೇವಾಂಶದ ಮಾಹಿತಿ
ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು ತೇವಾಂಶ 60ರಷ್ಟು ದಾಖಲಾಗಿದೆ. ಅಲ್ಲದೇ ಗಾಳಿಯ ವೇಗ ಗಂಟೆಗೆ 20 ಕಿ.ಮೀ ಕಂಡು ಬಂದಿದೆ. ಅದೇ ರೀತಿ ಬಾಗಲಕೋಟೆ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 71ರಷ್ಟು ತೇವಾಂಶ ಇದ್ದು, ಮಂಗಳೂರಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 71ರಷ್ಟು ತೇವಾಂಶ ಇದೆ. ಶಿವಮೊಗ್ಗ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59ರಷ್ಟು ತೇವಾಂಶ ಇದ್ದು, ಮೈಸೂರಿನಲ್ಲಿ 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಇದ್ದು, ತೇವಾಂಶ 61ರಷ್ಟು ದಾಖಲಾಗಿದೆ. ಬಳ್ಳಾರಿಯಲ್ಲಿ 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 69ರಷ್ಟು ತೇವಾಂಶ ಇದೆ.
ರಾಯಚೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 63ರಷ್ಟು ತೇವಾಂಶ ಇದ್ದು, ಚಿತ್ರದುರ್ಗ 27ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 77ರಷ್ಟು ತೇವಾಂಶ, ಕಲಬುರಗಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 73ರಷ್ಟು ತೇವಾಂಶ ಇದ್ದು, ಚಿಕ್ಕಮಗಳೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 70ರಷ್ಟು ತೇವಾಂಶ ದಾಖಲಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ












Click it and Unblock the Notifications