• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Infographics: ಕೊರೊನಾ ಎರಡನೇ ಅಲೆಗೂ ಮೊದಲೇ ಎಡವಿತಾ ಸರ್ಕಾರ?

|

ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೇನೋ Test, Trace, ಮತ್ತು Treat ಎಂಬ ಮಂತ್ರವನ್ನು ಜಪಿಸುತ್ತಿದ್ದಾರೆ. ಆದರೆ ದೇಶದಲ್ಲಿ ವಾಸ್ತವದ ಸ್ಥಿತಿಯೇ ಬೇರೆಯಾಗಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯ ಹಪಹಪಿಗೆ ಬಿದ್ದ ಸರ್ಕಾರಗಳು ಸಾಮಾಜಿಕ ಅಂತರ ಹಾಗೂ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ತಗ್ಗಿಸಿತು. ಒಂದು ಹಂತದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಯಿತು ಎಂದು ಇಡೀ ದೇಶ ಅಂದುಕೊಳ್ಳುತ್ತಿತ್ತು. ಆದರೆ ದೇಶದಲ್ಲಿ ಕೊರೊನಾವೈರಸ್ ಸೋಂಕು ಕಡಿಮೆ ಆಗಿರಲಿಲ್ಲ, ಬದಲಿಗೆ ಸೋಂಕು ತಪಾಸಣೆ ವೇಗ ಕಡಿಮೆಯಾಗಿತ್ತು.

ಕೊವಿಡ್-19 ಸೋಂಕಿತ ತಪಾಸಣೆಯನ್ನೇ ಮಾಡದಿದ್ದ ಸಂದರ್ಭದಲ್ಲಿ ಸೋಂಕು ತಗುಲಿದೆಯೋ ಇಲ್ಲವೋ ಎಂಬುದನ್ನು ಹೇಗೆ ತಾನೇ ಗುರುತಿಸುವುದಕ್ಕೆ ಸಾಧ್ಯವಾಗುತ್ತದೆ. ಇಂಥ ವೇಳೆಯಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು.

ಜನವರಿ 16ರಂದು ಪ್ರಧಾನಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇ ತಡ, ಅಲ್ಲಿಂದ ಎರಡು ತಿಂಗಳಿನಲ್ಲಿ ದೇಶದ ಪರಿಸ್ಥಿತಿಯೇ ಬದಲಾಯಿತು. ಪ್ರತಿನಿತ್ಯ ಸಾವಿರ ಸಾವಿರ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಸೋಂಕಿತ ಪ್ರಕರಣಗಳ ಸಂಖ್ಯೆ ಏಪ್ರಿಲ್ 20ರ ವೇಳೆಗೆ 2.59 ಲಕ್ಷದ ಗಡಿ ದಾಟಿದೆ. ಪ್ರಸ್ತುತ ದೇಶದಲ್ಲಿ 52.2 ದಿನಗಳಲ್ಲಿ ಸೋಂಕಿತ ಪ್ರಕರಣಗಳು ಡಬಲ್ ಆಗುತ್ತಿವೆ.

ಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ ಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ಭಾರತದಲ್ಲಿ ಕೊರೊನಾವರೈಸ್ ಸೋಂಕಿನ ತಪಾಸಣೆಗೆ ಇದೀಗ ಮತ್ತೆ ವೇಗ ನೀಡಲಾಗಿದೆ. ದೇಶಾದ್ಯಂತ 15 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗುತ್ತಿದೆ. ಈವರೆಗೂ 26 ಕೋಟಿಗೂ ಅಧಿಕ ಮಂದಿಗೆ ಸೋಂಕಿನ ತಪಾಸಣೆ ನಡೆಸಲಾಗಿದೆ. ಪ್ರಸ್ತುತ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆ, ಕೊವಿಡ್-19 ಸೋಂಕಿನ ತಪಾಸಣೆ ಮತ್ತು ಲಸಿಕೆ ವಿತರಣೆಗಳ ಕುರಿತು ಒಂದು ವಿವರಣಾತ್ಮಕ ವರದಿ ಇಲ್ಲಿದೆ ನೋಡಿ.

ದೇಶದಲ್ಲಿ 24 ಗಂಟೆಗಳಲ್ಲಿ 1761 ಮಂದಿ ಕೊರೊನಾಗೆ ಬಲಿ

ದೇಶದಲ್ಲಿ 24 ಗಂಟೆಗಳಲ್ಲಿ 1761 ಮಂದಿ ಕೊರೊನಾಗೆ ಬಲಿ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 259170 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನ 1,761 ಮಂದಿ ಪ್ರಾಣ ಬಿಟ್ಟಿದ್ದು, 1,54,761 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,53,21,089 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,31,08,582 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,80,530 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 20,31,977 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ?

ಭಾರತದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ?

ಭಾರತದಲ್ಲಿ ಈವರೆಗೂ 12,71,29,113 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಈ ಪೈಕಿ 91,69,353 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 57,66,012 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,14,21,780 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 56,64,213 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.


ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,23,06,422 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 13,03,610 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,66,41,581 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 46,83,061 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Explainer: ಕೊರೊನಾವೈರಸ್ ಅಲೆಗಳ ಆಯುಷ್ಯದ ಮೇಲೆ ಭಾರತದ ಭವಿಷ್ಯ!?Explainer: ಕೊರೊನಾವೈರಸ್ ಅಲೆಗಳ ಆಯುಷ್ಯದ ಮೇಲೆ ಭಾರತದ ಭವಿಷ್ಯ!?

ಭಾರತದಲ್ಲಿ ಕೊರೊನಾವೈರಸ್ ತಪಾಸಣೆ ಲೆಕ್ಕಾಚಾರ

ಭಾರತದಲ್ಲಿ ಕೊರೊನಾವೈರಸ್ ತಪಾಸಣೆ ಲೆಕ್ಕಾಚಾರ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಪ್ರತಿ 10 ಲಕ್ಷ ಜನರಲ್ಲಿ 32,128.4 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 15,19,486 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,94,14,035 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಅತಿಹೆಚ್ಚು ಕೊರೊನಾ ಪರೀಕ್ಷೆ ನಡೆಸಿದ ಟಾಪ್-5 ರಾಜ್ಯ

ಅತಿಹೆಚ್ಚು ಕೊರೊನಾ ಪರೀಕ್ಷೆ ನಡೆಸಿದ ಟಾಪ್-5 ರಾಜ್ಯ

ಭಾರತದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಿದ ರಾಜ್ಯಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕ, ಹಾಗೂ ತಮಿಳುನಾಡು ರಾಜ್ಯಗಳು ಗುರುತಿಸಿಕೊಂಡಿವೆ.

ಈ ರಾಜ್ಯಗಳಲ್ಲಿ 1 ಕೋಟಿಗೂ ಅಧಿಕ ಮಂದಿಗೆ ತಪಾಸಣೆ

ಈ ರಾಜ್ಯಗಳಲ್ಲಿ 1 ಕೋಟಿಗೂ ಅಧಿಕ ಮಂದಿಗೆ ತಪಾಸಣೆ

ದೇಶದಲ್ಲಿ 26 ಕೋಟಿಗೂ ಅಧಿಕ ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ. ಈ ಪೈಕಿ ದೆಹಲಿ, ಗುಜರಾತ್, ಆಂಧ್ರ ಪ್ರದೇಶ, ಕೇರಳ ಮತ್ತು ತೆಲಂಗಾಣದಲ್ಲಿ 1 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಸೋಂಕು ತಪಾಸಣೆ ನಡೆಸಲಾಗಿದೆ.

ಈ ರಾಜ್ಯಗಳಲ್ಲಿ 98 ಲಕ್ಷ ಮೀರಿಲ್ಲ 71 ಲಕ್ಷಕ್ಕಿಂತ ಕಡಿಮೆಯಿಲ್ಲ

ಈ ರಾಜ್ಯಗಳಲ್ಲಿ 98 ಲಕ್ಷ ಮೀರಿಲ್ಲ 71 ಲಕ್ಷಕ್ಕಿಂತ ಕಡಿಮೆಯಿಲ್ಲ

ಕೊರೊನಾವೈರಸ್ ಸೋಂಕಿನ ತಪಾಸಣೆಯ ವೇಗ ಈ ಪಂಚ ರಾಜ್ಯಗಳಲ್ಲಿ ಸ್ಥಿರವಾಗಿದೆ. ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಈವರೆಗೂ 71 ಲಕ್ಷಕ್ಕಿಂತ ಹೆಚ್ಚು ಮತ್ತು 99 ಲಕ್ಷಕ್ಕಿಂತ ಕಡಿಮೆ ಜನರಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಈ ರಾಜ್ಯಗಳಲ್ಲಿ 64 ಲಕ್ಷಕ್ಕಿಂತ ಹೆಚ್ಚು ಜನರಿಗೆ ತಪಾಸಣೆ

ಈ ರಾಜ್ಯಗಳಲ್ಲಿ 64 ಲಕ್ಷಕ್ಕಿಂತ ಹೆಚ್ಚು ಜನರಿಗೆ ತಪಾಸಣೆ

ಹರಿಯಾಣ, ಜಮ್ಮು ಕಾಶ್ಮೀರ, ಪಂಜಾಬ್, ಛತ್ತೀಸ್‌ಗಢ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ 64 ಲಕ್ಷಕ್ಕಿಂತ ಹೆಚ್ಚು ಮತ್ತು 68 ಲಕ್ಷಕ್ಕಿಂತ ಕಡಿಮೆ ಜನರಿಗೆ ಕೊವಿಡ್-19 ಸೋಂಕಿನ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಪಟ್ಟಿ ಇಲ್ಲಿದೆ ನೋಡಿ.

ಪಂಚರಾಜ್ಯಗಳಲ್ಲಿ ಒಂದು ದಿನ ಎಷ್ಟು ಜನರ ತಪಾಸಣೆ

ಪಂಚರಾಜ್ಯಗಳಲ್ಲಿ ಒಂದು ದಿನ ಎಷ್ಟು ಜನರ ತಪಾಸಣೆ

ಉತ್ತರಾಖಂಡ್, ಹಿಮಾಚಲ ಪ್ರದೇಶ, ಪುದುಚೇರಿ, ತ್ರಿಪುರಾ ಹಾಗೂ ಮಣಿಪುರದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರಾಖಂಡ್ ಹೊರತುಪಡಿಸಿ ಉಳಿದೆ ಕಡೆಗಳಲ್ಲಿ ಸೋಂಕು ತಪಾಸಣೆ ಸಂಖ್ಯೆ 6 ಸಾವಿರವನ್ನೂ ಮುಟ್ಟಿಲ್ಲ.

ದೇಶದ ಸಣ್ಣ ರಾಜ್ಯಗಳಲ್ಲಿ ಹೇಗಿದೆ ತಪಾಸಣೆ

ದೇಶದ ಸಣ್ಣ ರಾಜ್ಯಗಳಲ್ಲಿ ಹೇಗಿದೆ ತಪಾಸಣೆ

ಭಾರತದ ಸಣ್ಣ ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವೂ ಕೂಡಾ ಸಣ್ಣದಾಗಿದೆ. ಗೋವಾ, ಮೇಘಾಲಯ, ಅರುಣಾಚಲ ಪ್ರದೇಶ, ಚಂಡೀಘರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸೋಂಕು ತಪಾಸಣೆ ಸಂಖ್ಯೆ 3 ಸಾವಿರದ ಗಡಿಯನ್ನೂ ತಲುಪಿಲ್ಲ.

ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊವಿಡ್-19 ಪರೀಕ್ಷೆ

ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊವಿಡ್-19 ಪರೀಕ್ಷೆ

ಮೀಜೋರಾಂ, ನಾಗಾಲ್ಯಾಂಡ್, ಲಕ್ಷದ್ವೀಪ, ದಾದ್ರಾ-ಹವೇಲಿ, ದಿಯು ಮತ್ತು ದಮನ್, ಲಡಾಖ್ ಮತ್ತು ಸಿಕ್ಕಿಂ ರೀತಿಯ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತ ತಪಾಸಣೆಗೆ ಸರ್ಕಾರ ಅಷ್ಟಾಗಿ ತಲೆ ಕೆಡಿಸಿಕೊಂಡಿಲ್ಲ ಎಂಬುದು ಅಂಕಿ-ಸಂಖ್ಯೆಗಳಲ್ಲಿ ಸ್ಪಷ್ಟವಾಗುತ್ತದೆ.

English summary
India Has Conducted 26,94,14,035 Cumulative Covid-19 Tests So Far, The Government Announced. Moreover, 15,19,486 Tests Were Conducted In The Last 24 Hours. Here Are The State-wise List. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X