• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಯನಗರ ಚುನಾವಣೆ : ಯಾವ ಅಭ್ಯರ್ಥಿಗೆ ಎಷ್ಟು ಮತ?

By Gururaj
|

ಬೆಂಗಳೂರು, ಜೂನ್ 14 : ಜಯನಗರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 2887 ಮತಗಳ ಅಂತರದಿಂದ ಜಯಗಳಿಸಿದ್ದು, ಕ್ಷೇತ್ರ ಕಾಂಗ್ರೆಸ್ ವಶವಾಗಿದೆ.

ಜೂನ್ 11ರಂದು ಬೆಂಗಳೂರಿನ ಜಯನಗರ ಕ್ಷೇತ್ರದ ಚುನಾವಣೆ ನಡೆದಿತ್ತು. ಜೂನ್ 13ರಂದು ಫಲಿತಾಂಶ ಪ್ರಕಟವಾಗಿದೆ. 19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. 848 ನೋಟಾ ಮತಗಳು ಚಲಾವಣೆಯಾಗಿವೆ.

ಜಯನಗರದಲ್ಲಿ ಸೌಮ್ಯಾ ರೆಡ್ಡಿ ಗೆಲುವಿಗೆ 4 ಕಾರಣಗಳು

ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ 54,458 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ 51,571 ಮತಗಳನ್ನು ಪಡೆದಿದ್ದಾರೆ. ಕಣದಿಂದ ಹಿಂದೆ ಸರಿದು ಕಾಂಗ್ರೆಸ್‌ಗೆ ಬೆಂಬಲ ಘೋಷಣೆ ಮಾಡಿದರೂ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರಿಗೆ 817 ಮತಗಳು ಬಂದಿವೆ.

ಜಯನಗರ ಕ್ಷೇತ್ರದ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಪ್ರಚಾರ ಕಾರ್ಯ ಆರಂಭಿಸಿ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿಕೃಷ್ಣಾ ರೆಡ್ಡಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಅವರಿಗೆ 1,861 ಮತಗಳು ಸಿಕ್ಕಿವೆ.

ಜಯನಗರ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳಲ್ಲಿ ಯಾರಿಗೆ ಎಷ್ಟು ಮತ ಸಿಕ್ಕಿದೆ? ಇಲ್ಲಿದೆ ನೋಡಿ ಮಾಹಿತಿ.

English summary
Bengaluru Jayanagar assembly constituency elections result 2018 announced. Former minister Ramalinga Reddy daughter Sowmya Reddy wins elections. 19 candidates in the fray here is a complete list of votes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X