Infographics: 15 ಕ್ಷೇತ್ರಗಳಲ್ಲಿ ಯಾವಾಗ ಉಪ ಚುನಾವಣೆ?
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ 17 ವಿಧಾನಸಭೆ ಕ್ಷೇತ್ರದಲ್ಲಿ 15 ಕ್ಷೇತ್ರಕ್ಕೆ ಚುನಾವಣೆ ದಿನಾಂಕ ಪ್ರಕಟವಾಗಿದೆ.
ಕರ್ನಾಟಕದಲ್ಲಿ ಅಕ್ಟೋಬರ್ 21 ರಂದು ಮತದಾನ ನಡೆಯಲಿದ್ದು, ಫಲಿತಾಂಶ ಅಕ್ಟೋಬರ್ 24 ಕ್ಕೆ ಪ್ರಕಟವಾಗಲಿದೆ. ಸೆಪ್ಟೆಂಬರ್ 23 ಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆ ಕೊನೆಯ ದಿನ ಆಗಿದೆ.
ಆರ್.ಆರ್.ನಗರ ಮತ್ತು ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿಲ್ಲ. ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಈ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿಲ್ಲ. ಒಟ್ಟಾರೆ, ದೇಶದ 17 ರಾಜ್ಯಗಳಲ್ಲಿ 64 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಸೆಪ್ಟೆಂಬರ್ 23ರಿಂದ ಗೆಜೆಟ್ ನೋಟಿಫಿಕೇಷನ್ ಜಾರಿಯಲ್ಲಿರಲಿದೆ
ಪ್ರಮುಖ ದಿನಾಂಕಗಳು:
ನಾಮ ಪತ್ರ ಸಲ್ಲಿಕೆ ಕೊನೆ ದಿನಾಂಕ: ಸೆಪ್ಟೆಂಬರ್ 30
ನಾಮಪತ್ರ ಪರಿಶೀಲನೆ: ಅಕ್ಟೋಬರ್ 01
ನಾಮಪತ್ರ ಹಿಂತಿರುಗಿಸಲು ಕೊನೆ ದಿನಾಂಕ: ಅಕ್ಟೋಬರ್ 03
ಮತದಾನದ ದಿನಾಂಕ: ಅಕ್ಟೋಬರ್ 21
ಫಲಿತಾಂಶದ ದಿನಾಂಕ: ಅಕ್ಟೋಬರ್ 24













Click it and Unblock the Notifications