Infographics: ಸೆಪ್ಟೆಂಬರ್ 16ರಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

ನವದೆಹಲಿ, ಸೆಪ್ಟೆಂಬರ್ 16: ಕಳೆದ ವಾರ ಭಾರತೀಯ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಬುಧವಾರ ದಿಢೀರ್ ಏರಿಕೆ ಕಂಡಿತ್ತು. ಇದೀಗ ಸೆಪ್ಟೆಂಬರ್ 16ರಂದು ಮತ್ತೆ ಬೆಲೆ ಇಳಿಕೆಯಾಗಿದೆ.

ಆಗಸ್ಟ್‌ ಅಂತ್ಯದಲ್ಲಿ ಹಾಗೂ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯಾಗಿತ್ತು. ಕೆಲವು ದಿನ ಸ್ಥಿರತೆ ಕಾಯ್ದುಕೊಂಡಿತ್ತು. ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಕುಸಿದಿದ್ದು, ಮತ್ತೆ ಬೆಲೆ ಇಳಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.95% ರಷ್ಟು ಇಳಿಕೆಯಾಗಿ 1,778.14 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.71% ಇಳಿಕೆಯಾಗಿ 23.49 ಯುಎಸ್ ಡಾಲರ್ ಆಗಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ, ಸೆಪ್ಟೆಂಬರ್ 16ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 300 ರೂ ಇಳಿಕೆಯಾಗಿ 46,150 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 320 ರೂ ಇಳಿಕೆಯಾಗಿ 50,350 ರೂ ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ 300 ರೂ ಇಳಿಕೆಯಾಗಿ 44,000 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 330 ರೂ ಇಳಿಕೆಯಾಗಿ 48,000 ರೂ ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. 1 ಕೆ.ಜಿ.ಗೆ ಸೆಪ್ಟೆಂಬರ್ 16ರ ದರದಂತೆ: ಚೆನ್ನೈ, ಹೈದರಾಬಾದ್‌ನಲ್ಲಿ 67,800 ರೂ, ಮುಂಬೈ, ದೆಹಲಿ, ಬೆಂಗಳೂರು, ಕೋಲ್ಕತ್ತಾದಲ್ಲಿ 62,800 ರೂ ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ...

ಚಿನ್ನದ ಮೌಲ್ಯ ಏರಿಳಿತವೇಕೆ?
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು. 30 ದಿನಗಳ ಹಿಂದೆ ಸ್ಪಾಟ್ ಗೋಲ್ಡ್ ಶೇ 0.36ರಷ್ಟು ಏರಿಕೆ ಕಂಡು 6.40 ಡಾಲರ್ ಮೌಲ್ಯ ಹೆಚ್ಚಿಸಿಕೊಂಡಿದೆ. ಇದೇ ಅವಧಿಯಲ್ಲಿ ಬೆಳ್ಳಿ ದರ ಶೇ 0.29ರಷ್ಟು ಇಳಿಕೆ ಕಂಡು 0.07 ಡಾಲರ್ ಮೌಲ್ಯ ವ್ಯತ್ಯಾಸ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 16ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಚಿತ್ರ ವಿನ್ಯಾಸ: ಭರತ್ ಎಚ್.ಸಿ.

 Infographics: Gold Rates In Indian Cities On September 16
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+