ಜುಲೈ 24ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ವಿವರ...

ನವದೆಹಲಿ, ಜುಲೈ 24: ಭಾರತೀಯ ಮಾರುಕಟ್ಟೆಯಲ್ಲಿ ಜುಲೈ 24ರಂದು ಚಿನ್ನದ ಬೆಲೆಯಲ್ಲಿ ಏರಿಳಿತ ಕಂಡುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಕೆಲವು ನಗರಗಳಲ್ಲಿ ಕೊಂಚ ಏರಿಕೆ ಕಂಡಿದೆ. ಇನ್ನಷ್ಟು ನಗರಗಳಲ್ಲಿ ಮತ್ತಷ್ಟು ಇಳಿಕೆಯಾಗಿದೆ.

ಬೆಳ್ಳಿ ಬೆಲೆಯಲ್ಲಿಯೂ ಕುಸಿತ ಕಂಡುಬಂದಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 72,000 ರೂ, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 67,050 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಗ್ರಾಂ ಚಿನ್ನ 44,690 ರೂ ಆಗಿದ್ದು, ಅಪರಂಜಿ ಚಿನ್ನ 48,760 ರೂ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 0.29% ರಷ್ಟು ಇಳಿಕೆಯಾಗಿ 1,802.30 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.00%ರಷ್ಟು ಇಳಿಕೆಯಾಗಿ 25.17 ಯುಎಸ್ ಡಾಲರ್ ಆಗಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜುಲೈ 24ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ..

ಚಿತ್ರ ವಿನ್ಯಾಸ: ಭರತ್ ಎಚ್.ಸಿ.

 Infographics: Gold Rates In Major Cities On July 24
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+