ಏ. 28ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ
ಏಪ್ರಿಲ್ 28ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏಪ್ರಿಲ್ ತಿಂಗಳಲ್ಲಿ ಸತತವಾಗಿ ಏರಿಳಿತ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಂದು, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ಗೆ 1,767.76 ಯುಎಸ್ ಡಾಲರ್‌ನಷ್ಟಿತ್ತು. ಬೆಳ್ಳಿ ಪ್ರತಿ ಔನ್ಸ್ ಬೆಲೆ 26 ಯುಎಸ್ ಡಾಲರ್ ಆಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 45, 690 ರು ಹಾಗೂ ಅಪರಂಜಿ 49, 870 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ: ದೆಹಲಿ, ಮುಂಬೈ, ಕೋಲ್ಕತಾದಲ್ಲಿ ಪ್ರತಿ 1 ಕೆ.ಜಿಗೆ 69, 000 ರು ಇದ್ದರೆ, ಚೆನ್ನೈ, ಹೈದರಾಬಾದ್ ಹಾಗೂ ಇತರೆಡೆ ಪ್ರತಿ ಕೆಜಿಗೆ 74,000 ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ? ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಏ.28ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications