ಜುಲೈ 1ರಂದು ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಾಗಿದೆ?
ನವದೆಹಲಿ, ಜುಲೈ 01: ಭಾರತದ ಪ್ರಮುಖ ನಗರಗಳಲ್ಲಿ ಜುಲೈ ತಿಂಗಳ ಮೊದಲ ದಿನವೇ ಚಿನ್ನದ ಬೆಲೆ ಏರಿಕೆಯಾಗಿದೆ. ಬುಧವಾರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿತ್ತು. ಇದೀಗ ಮತ್ತೆ ಬೆಲೆ ಏರಿಕೆಯಾಗಿದೆ.
ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 45,890 ರೂ ಇದ್ದು, ಅಪರಂಜಿ ಚಿನ್ನದ ಬೆಲೆ 49,890 ರೂ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್(1 ounce=28.3495 ಗ್ರಾಂ)ಗೆ ಶೇ 0.49% ರಷ್ಟು ಏರಿಕೆಯಾಗಿ 1,777.23 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.66%ರಷ್ಟು ಏರಿಕೆಯಾಗಿ 26.26 ಯುಎಸ್ ಡಾಲರ್ ಆಗಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜುಲೈ 01 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...
ಚಿತ್ರ ವಿನ್ಯಾಸ: ಭರತ್ ಎಚ್. ಸಿ.













Click it and Unblock the Notifications