Get Updates
Get notified of breaking news, exclusive insights, and must-see stories!

ಜುಲೈ 05: ಚಿನ್ನ, ಬೆಳ್ಳಿ ದರ ಇಳಿಕೆ, ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ?

ನವದೆಹಲಿ, ಜುಲೈ 05: ದೇಶದ ಹಲವೆಡೆ ಅನ್ ಲಾಕ್ ಜಾರಿಯಲ್ಲಿದ್ದು, ಅಂಗಡಿ ಮಳಿಗೆಗಳು, ಮಾಲ್ ಓಪನ್ ಆಗುತ್ತಿವೆ. ಭಾರತೀಯ ಮಾರುಕಟ್ಟೆಯಲ್ಲಿ, ಖರೀದಿ ಇಲ್ಲದೆ ವಹಿವಾಟು ಕುಸಿತ ಕಾಣುತ್ತಿತ್ತು, ಈಗ ದೇಶದ ಹಲವೆಡೆ ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಜುಲೈ 05ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಏರಿಕೆಯಾಗಿ 47,292ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಕುಗ್ಗಿ 70,088ರು ನಷ್ಟಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.25ರಷ್ಟು ಏರಿಕೆಯಾಗಿ 1,791.80 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.04ರಷ್ಟು ಏರಿಕೆಯಾಗಿ 26.45ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 44,310ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 48,340ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 75,000ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 70,400ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

Infographics: Gold Rates on Major Cities Today July 05

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜುಲೈ 05ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ..

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+