• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂನ್ 12 ಪ್ರಮುಖ ನಗರಗಳಲ್ಲಿ ಎಷ್ಟಾಗಿದೆ ಚಿನ್ನ ಬೆಳ್ಳಿ ಬೆಲೆ?

|
Google Oneindia Kannada News

ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ ಶನಿವಾರ, ಜೂನ್ 12ರಂದು ಕೊಂಚ ಇಳಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ 1.12%ರಷ್ಟು ಇಳಿಕೆಯಾಗಿ 1,876.87 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.15%ರಷ್ಟು ಇಳಿಕೆಯಾಗಿ 27.92 ಯುಎಸ್ ಡಾಲರ್ ಆಗಿದೆ.

ಜೂನ್ 11ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು? ಜೂನ್ 11ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?

ನವದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 350 ರೂ ಇಳಿಕೆಯಾಗಿ 47,900 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 440 ರೂ ಇಳಿಕೆಯಾಗಿ 52,200 ರೂಗೆ ತಲುಪಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 3500 ರೂ ಇಳಿಕೆ ಕಂಡು 45,750 ರೂ ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 400 ರೂ ಇಳಿಕೆಯಾಗಿ 49,900 ರೂ ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತಾದಲ್ಲಿ 72,200 ರೂ, ಚೆನ್ನೈ, ಹೈದರಾಬಾದ್ 77,300 ರೂ ಆಗಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

      Umpire ಜೊತೆ Shakib ಹೀಗೆ ಕಿತ್ತಾಡಿದ್ದೇಕೆ | Oneindia Kannada

      ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 12ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

      English summary
      Infographics: The price of Gold Rates on Major Cities in India on saturday (June 12).
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X