ಜೂನ್ 30ರಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ

ನವದೆಹಲಿ, ಜೂನ್ 30: ಭಾರತದ ಪ್ರಮುಖ ಪಟ್ಟಣಗಳಲ್ಲಿ ಮಂಗಳವಾರ ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಬುಧವಾರ ಮತ್ತೆ ಇಳಿಕೆ ಹಾದಿ ಹಿಡಿದಿದೆ. ಜೂನ್ 30ರಂದು ಚಿನ್ನದ ಬೆಲೆ ಏಕಾಏಕಿ ಇಳಿಕೆ ಕಂಡಿದೆ.

ಜೂನ್ ತಿಂಗಳಿನಲ್ಲಿ ಹಲವು ಕಾರಣಗಳಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಕುಸಿತ ಕಂಡಿತ್ತು. ಇದೀಗ ತಿಂಗಳಾಂತ್ಯಕ್ಕೆ ಮತ್ತೆ ಬೆಲೆ ಇಳಿಕೆಯಾಗಿದೆ. ನವದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,900 ರೂ ಹಾಗೂ ಅಪರಂಜಿ ಚಿನ್ನದ ಬೆಲೆ 49,900 ರೂಗೆ ಇಳಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌(1 ounce=28.3495 ಗ್ರಾಂ)ಗೆ ಶೇ 1.20% ರಷ್ಟು ಇಳಿಕೆಯಾಗಿ 1,756.94 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.31%ರಷ್ಟು ಇಳಿಕೆಯಾಗಿ 25.77 ಯುಎಸ್ ಡಾಲರ್ ಆಗಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಜೂನ್ 30ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ...

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

 Infographics: Gold Rates on Major Cities Today June 30
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+