ಮೇ 13ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ

ಮೇ 13ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

Recommended Video

      ಮನೆಯಲ್ಲಿ ಲಕ್ಷಿ ನೆಲಸಿರಬೇಕು ಅಂದ್ರೆ ಹೀಗೇ ಮಾಡಿ!! | Oneindia Kannada

      ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.18ರಷ್ಟು ಏರಿಕೆಯಾಗಿ 1,820.84 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.60ರಷ್ಟು ಏರಿಕೆಯಾಗಿ 26.96ಯುಎಸ್ ಡಾಲರ್ ಆಗಿದೆ.

      ಮೊದಲ ತ್ರೈಮಾಸಿಕದ ಒಟ್ಟು ಜಾಗತಿಕ ಚಿನ್ನದ ಬೇಡಿಕೆ 815.7 ಟನ್‌ಗಳಷ್ಟಿತ್ತು. ನಂತರ ಚಿನ್ನದ ಬೆಂಬಲಿತ ಇಟಿಎಫ್‌ಗಳು 177.9 ಟನ್‌ ಹೊರಹರಿವಿನ ಕಾರಣದಿಂದ ವರ್ಷದಿಂದ ವರ್ಷಕ್ಕೆ ಗಮನಾರ್ಹ ಕುಸಿತ (23%) ಕಂಡಿದೆ. ಸತತ 7 ದಿನಗಳ ಕಾಲ ಚಿನ್ನದ ಬೆಲೆ ಕುಸಿತ ಕಂಡಿದ್ದು, ಒಟ್ಟಾರೆ, 10,000ರುಗೂ ಅಧಿಕ ಮೊತ್ತ ಕಳೆದುಕೊಂಡಿದೆ.

      ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 44,500ರು ಬೆಲೆ ಹಾಗೂ ಅಪರಂಜಿ 48,560 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ ನಲ್ಲಿ76,000ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 71,130 ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

      Infographics: Gold Rates on Major Cities Today May 13

      ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

      ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 13ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

      Infographics: Gold Rates on Major Cities Today May 13
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+