• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇ 17ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ

|

ಮೇ 17ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.17ರಷ್ಟು ಏರಿಕೆಯಾಗಿ 1,846.78 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.32ರಷ್ಟು ಏರಿಕೆಯಾಗಿ 27.51ಯುಎಸ್ ಡಾಲರ್ ಆಗಿದೆ.

ಮೊದಲ ತ್ರೈಮಾಸಿಕದ ಒಟ್ಟು ಜಾಗತಿಕ ಚಿನ್ನದ ಬೇಡಿಕೆ 815.7 ಟನ್‌ಗಳಷ್ಟಿತ್ತು. ನಂತರ ಚಿನ್ನದ ಬೆಂಬಲಿತ ಇಟಿಎಫ್‌ಗಳು 177.9 ಟನ್‌ ಹೊರಹರಿವಿನ ಕಾರಣದಿಂದ ವರ್ಷದಿಂದ ವರ್ಷಕ್ಕೆ ಗಮನಾರ್ಹ ಕುಸಿತ (23%) ಕಂಡಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 240 ರು ಏರಿಕೆಯಾಗಿ 45,150ರು ಬೆಲೆ ಹಾಗೂ ಅಪರಂಜಿ 10 10 ಗ್ರಾಂಗೆ 270ರು ಏರಿಕೆಯಾಗಿ 49, 260 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ ನಲ್ಲಿ76,800ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 72,000 ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತರ್ ರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 10ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

English summary
Infographics: The price of Gold Rates slashed on Major Cities in India on Monday (May 17).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X