ದೇಶದ ಹಲವೆಡೆ ಚಿನ್ನದ ಬೆಲೆ ಮತ್ತೆ ಏರಿಕೆ, ಯಾವ ನಗರಗಳಲ್ಲಿ ಎಷ್ಟಿದೆ?

ಅಕ್ಷಯ ತೃತೀಯಕ್ಕೆ ಡಲ್ ಹೊಡೆದಿದ್ದ ಚಿನ್ನದ ದರ ಒಂದೇ ದಿನದಲ್ಲಿ ಕೊಂಚ ಏರಿಕೆ ಕಂಡಿದೆ.

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 44,650 ಇದ್ದು, ಇಂದು 44,900 ಆಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,560 ರೂ. ಇದ್ದುದು ಇಂದು 48,980 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,650 ರೂ. ಇದ್ದುದು ಇಂದು 44,900 ರೂ. ಆಗಿದೆ. ಬೆಳ್ಳಿ ದರ ಇಂದು ಏರಿಕೆಯಾಗಿದ್ದು, ನಿನ್ನೆ 70,500 ರೂ. ಇದ್ದ ಬೆಳ್ಳಿ ಬೆಲೆ ಇಂದು 71,000 ರೂ. ಆಗಿದೆ.

ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದ್ದು, 2 ದಿನಗಳ ಹಿಂದೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 44,900 ರೂ. ಇದ್ದುದು ಇಂದು 45,060 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 45,910 ರೂ. ಇದ್ದುದು ಇಂದು 46,060 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 48,980 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 44,900 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

ಭಾರತದಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇಂದು 1 ಕೆಜಿಗೆ 71,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 71,000 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,300 ರೂ. ಆಸುಪಾಸಿನಲ್ಲಿದೆ.

ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.

ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್ ಮುಂತಾದ ನಗರಗಳಲ್ಲಿ ಮೇ 14ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Infographics: Gold Rates On Major Cities Today On May 15
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+