• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Infographics:ಜಿಲ್ಲಾವಾರು ಗ್ರಾಮ ಪಂಚಾಯಿತಿ ಫಲಿತಾಂಶ ಅಪ್ಡೇಟ್ಸ್

|

ಕರ್ನಾಟಕದ 30 ಜಿಲ್ಲೆಗಳ 5,728 ಗ್ರಾಮ ಪಂಚಾಯಿತಿಗಳಲ್ಲಿ ಎರಡು ಹಂತಗಳಲ್ಲಿ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ಜಿಲ್ಲಾವಾರು ಪ್ರಮುಖ ಫಲಿತಾಂಶ ಅಪ್ಡೇಟ್ ಇಲ್ಲಿದೆ..

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸರಾಸರಿ ಶೇಕಡಾ 81.42 ರಷ್ಟು ಮತದಾನವಾಗಿತ್ತು. ಬೆಳಗ್ಗೆ 8ಕ್ಕೆ ಆರಂಭವಾಗುವ ಮತ ಎಣಿಕೆ ಪ್ರಕ್ರಿಯೆ ಮೂರು ಹಂತಗಳಲ್ಲಿ ಮುಗಿಯಲಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಬಳಕೆ ಮಾಡಲಾಗಿತ್ತು. ಉಳೆದೆಡೆಗಳಲ್ಲಿ ಬ್ಯಾಲೆಟ್ ಪೇಪರ್ ಎಣಿಕೆ ನಡೆಯುತ್ತಿದೆ.

Karnataka Gram Panchayat Election Results 2020 Live : ಪಂಚಾಯಿತಿ ಫಲಿತಾಂಶ

ರಾಜ್ಯದ ಎಲ್ಲ 30 ಜಿಲ್ಲೆಗಳ 226 ತಾಲೂಕುಗಳ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದ್ದು, ಒಟ್ಟು 5,728 ಪಂಚಾಯಿತಿಗಳ 91,339 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಎರಡು ಹಂತಗಳಲ್ಲಿ ನಡೆದ ಚುನಾವಣೆಗೆ ಒಟ್ಟು 3,11,887 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಅವರಲ್ಲಿ 2,97,281 ಅಭ್ಯರ್ಥಿಗಳ ನಾಮಪತ್ರ ಕಮಬದ್ಧವಾಗಿದ್ದವು. ಕೊನೆಗೆ 74,467 ಅಭ್ಯರ್ಥಿಗಳು ನಾಮಪತ್ರ ವಾಪಾಸ್ ಪಡೆದಿದ್ದರಿಂದ 8,074 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು.

ವಿವಿಧ ಕಾರಣಗಳಿಂದಾಗಿ ಒಟ್ಟು 648 ಸ್ಥಾನಗಳಿಗೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ. ಹೀಗಾಗಿ ಅಷ್ಟು ಸ್ಥಾನಗಳಿಗೆ ಚುನಾವಣೆ ನಡೆಯದೆ ಖಾಲಿ ಉಳಿದಿವೆ. ಡಿಸೆಂಬರ್ 30 ರಂದು ಮತ ಎಣಿಕೆ ನಡೆಯಲಿದ್ದು ಒಟ್ಟು 2,22,814 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

English summary
Infographics: Gram Panchayat election results 2020 updates district wise is here. Counting is going in three phases across 30 districts today(Dec 30).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X