ಕರ್ನಾಟಕದ 23 ಜಿಲ್ಲೆಗಳ ಬರಪೀಡಿತ 86 ತಾಲೂಕುಗಳ ಪಟ್ಟಿ
ಬೆಂಗಳೂರು, ಸೆಪ್ಟೆಂಬರ್ 12 : ಕರ್ನಾಟಕ ಸರ್ಕಾರ ಬರ ಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 23 ಜಿಲ್ಲೆಗಳ 86 ತಾಲೂಕುಗಳು 2018ನೇ ಸಾಲಿನಲ್ಲಿ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ ಉತ್ತಮವಾಗಿತ್ತು. ಮಲೆನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅವಾಂತರವನ್ನು ಸೃಷ್ಟಿ ಮಾಡಿತ್ತು. ಕೊಡಗು ಜಿಲ್ಲೆಯಲ್ಲಿ ಮಳೆ, ಪ್ರವಾಹದಿಂದಾಗಿ ಅಪಾರವಾದ ಹಾನಿಯಾಗಿದೆ.
ಆದರೆ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿಲ್ಲ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭೀಕರ ಬರದ ಛಾಯೆ ಆವರಿಸಿದೆ.
ಸರ್ಕಾರ ಬಿಡುಗಡೆ ಮಾಡಿರುವ ಬರ ಪೀಡಿತ ತಾಲೂಕುಗಳ ಪಟ್ಟಿ ಇಲ್ಲಿದೆ. ಸಾಧಾರಣ ಮಳೆಯಾಗಿರುವ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗಿದೆ. ಕೇಂದ್ರ ಸರಕಾರದ ವೀಕ್ಷಕರನ್ನು ರಾಜ್ಯಕ್ಕೆ ಕರೆಸಿ, ಅವರಿಂದಲೂ ಬರಪೀಡಿತ ಪ್ರದೇಶಗಳ ಸಮೀಕ್ಷೆ ರಾಜ್ಯ ಸರಕಾರ ಮಾಡಿಸಲಿ ಮತ್ತು ಪರಿಹಾರಕ್ಕೆ ಮನವಿ ಮಾಡಿಕೊಳ್ಳಲಿ.


















Click it and Unblock the Notifications