ಜೂ.12ರಂದು ಯಾವ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ?
ಬೆಂಗಳೂರು, ಜೂನ್ 12: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 12ರಂದು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.
ಈ ಮೂಲಕ ಮೇ 4ರಿಂದ ಇಲ್ಲಿಯವರೆಗೆ 24ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಕಳೆದ ತಿಂಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16 ರೂ ಹಾಗೂ ಡೀಸೆಲ್ 18 ರೂ ಏರಿಕೆಯಾಗಿತ್ತು. ಜೂನ್ 12ರಂದು ಇದೀಗ ಶನಿವಾರ ಪೆಟ್ರೋಲ್ ಲೀಟರ್‌ಗೆ 27 ಪೈಸೆ ಹಾಗೂ ಡೀಸೆಲ್ ಲೀಟರಿಗೆ 24 ಪೈಸೆ ಹೆಚ್ಚಳ ಮಾಡಲಾಗಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಬೆಲೆಯಿದ್ದು, ಲೀಟರ್ ಪೆಟ್ರೋಲ್‌ಗೆ 102.30 ರೂ ಹಾಗೂ ಲೀಟರ್ ಡೀಸೆಲ್‌ಗೆ 94.39 ರೂ ಆಗಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಕೆಲ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದೆ.

ಜೂನ್ 7 ರಂದು ಪೆಟ್ರೋಲ್ ಹಾಗೂ ಡೀಸೆಲ್ ಪ್ರತಿ ಲೀಟರ್ ಸರಾಸರಿ 27-28 ಪೈಸೆ ಏರಿಕೆಯಾಗಿತ್ತು. ಜೂನ್ 8 ದರ ಸ್ಥಿರವಾಗಿತ್ತು. ಜೂನ್ 9ರಂದು ಸರಾಸರಿ 23-25 ಪೈಸೆ ಏರಿಕೆಯಾಗಿತ್ತು. ಜೂನ್ 11ರಂದು ಪೆಟ್ರೋಲ್ ಬೆಲೆ 31 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ 28 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲ್ ಲೀಟರ್‌ಗೆ 27 ಪೈಸೆ ಹಾಗೂ ಡೀಸೆಲ್ ಲೀಟರಿಗೆ 24 ಪೈಸೆ ಹೆಚ್ಚಳ ಮಾಡಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 72.14ಯುಎಸ್ ಡಾಲರ್(1 USD=72.94ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರೂ ಗಡಿ ದಾಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.33 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 92.21 ರೂಪಾಯಿಗೆ ಮುಟ್ಟಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.39 ರೂಪಾಯಿ, ಬಳ್ಳಾರಿ 101.19 ರೂ, ಚಿಕ್ಕಮಗಳೂರು 100.15 ರೂ, ದಾವಣಗೆರೆಯಲ್ಲಿ 100.61ರೂ, ಶಿವಮೊಗ್ಗ 100.77 ರೂ ಇದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 12ರಂತೆ) ಪಟ್ಟಿ ಸಚಿತ್ರ ಮಾಹಿತಿ ಇಲ್ಲಿದೆ...
(ವಿನ್ಯಾಸ: ಭರತ್ ಎಚ್.ಸಿ)
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications