ಸರ್ದಾರ್ ಪಟೇಲ್ ಸ್ಮರಣೆಯ ಏಕತಾ ಪ್ರತಿಮೆ ನಿರ್ಮಾಣ ಟೈಮ್ ಲೈನ್
Recommended Video

ಬೆಂಗಳೂರು, ಅಕ್ಟೋಬರ್ 30: ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಸ್ಮರಣೆಗಾಗಿ ನಿರ್ಮಿಸಲಾಗಿರುವ 'ಏಕತಾ ಪ್ರತಿಮೆ' ಅಕ್ಟೋಬರ್ 31ರಂದು ಲೋಕರ್ಪಣೆಯಾಗಲಿದೆ.
ಪಟೇಲ್ ಅವರಿಗೆ ಸೂಕ್ತ ಗೌರವ ನೀಡಲು ಅವರ ಜನ್ಮದಿನವನ್ನು "ರಾಷ್ಟ್ರೀಯ ಏಕತಾ ದಿನ"ವನ್ನಾಗಿ ಆಚರಿಸಲು ಪ್ರಧಾನಿ ನಿರ್ಧರಿಸಿದ್ದಾರೆ. ಈ ಬೃಹತ್ ಪ್ರತಿಮೆಯು 182 ಮೀಟರ್ (ಸುಮಾರು 597 ಅಡಿ) ಎತ್ತರವಿರುವುದು ಹಾಗೂ ಅದನ್ನು ದಕ್ಷಿಣ ಗುಜರಾತ್‌ನಲ್ಲಿ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರಿನಲ್ಲಿ ನಿರ್ಮಿಸಲಾಗಿದೆ.

ಗುಜರಾತಿನ ಕರಮ್ ಸಂದ್ ನಲ್ಲಿ 1875ರ ಅಕ್ಟೋಬರ್ 31ರಂದು ಜನಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕಾನೂನು ಪದವಿ ಪಡೆದಿದ್ದರೂ ಗಾಂಧೀಜಿ ಅವರ ಕರೆಗೆ ಓಗೊಟ್ಟು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಧುಮುಕಿ ಸ್ವತಂತ್ರ ಭಾರತಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು.
ಸ್ವಾತಂತ್ಯ ಸಿಕ್ಕ ನಂತರ ರಾಜ್ಯಗಳ ಪುನರ್ ವಿಂಗಡನೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ಸುಮಾರು 500ಕ್ಕೂ ಅಧಿಕ ರಾಜಮನೆತನ ಅಡಿಯಲ್ಲಿದ್ದ ರಾಜ್ಯಗಳನ್ನು ನೆಹರೂ ಸರ್ಕಾರದ ಸುಪರ್ದಿಗೆ ತಂದರು. ಇದಲ್ಲದೆ ಗುಜರಾತಿನ ಖೇದ, ಬೊರ್ಸದ್, ಬಾರ್ಡೋಲಿಗಳಲ್ಲಿ ರೈತರ ಪರ ಹೋರಾಟದಲ್ಲೂ ಪಟೇಲ್ ಅವರು ಪಾಲ್ಗೊಂಡಿದ್ದರು.

75 ಸಾವಿರ ಕ್ಯೂಬಿಕ್ ಮೀಟರ್ ಕಾಂಕ್ರಿಟ್, 5700 ಮೆಟ್ರಿಕ್ ಟನ್ ಕಬ್ಬಿಣ, 18,500 ಉಕ್ಕು, 22,500 ಕಂಚು ಸೇರಿದಂತೆ ಮತ್ತಿತರ ವಸ್ತುಗಳನ್ನು ಬಳಸಿಕೊಳ್ಳಲಾಗುತ್ತದೆ. 3400 ನೌಕರರು, 250 ಇಂಜಿನಿಯರ್ ಗಳು ಸಾಧು ಬೇಟ್ ದ್ವೀಪದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಎಲ್ ಅಂಡ್ ಟಿ ನಿರ್ಮಾಣದ ವಿಶ್ವದ ಅತಿ ಎತ್ತರದ ಪ್ರತಿಮೆ ನಿರ್ಮಿಸಿರುವ ಶಿಲ್ಪಿ ರಾಮ್ ವಾನ್ಜಿ ಸುತಾರ್.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications