ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ : ಚಿತ್ರ ಮಾಹಿತಿ

ಬೆಂಗಳೂರು, ಮೇ 07 : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೊಂದು ಚುನಾವಣೆ ನಡೆಯಲಿದೆ. 63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ.

63 ಸ್ಥಳೀಯ ಸಂಸ್ಥೆಗಳ 1,361 ವಾರ್ಡ್‌ಗಳಿಗೆ ಮೇ 29ರಂದು ಚುನಾವಣೆ ನಡೆಯಲಿದೆ. ಮೇ 31ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿರುವ ಚುನಾವಣೆ ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

2018ರ ಆಗಸ್ಟ್‌ನಲ್ಲಿ 109 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. 2ನೇ ಹಂತದಲ್ಲಿ 103 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ, ಕ್ಷೇತ್ರ ಪುನರ್ ವಿಂಗಡನೆ, ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ಗೆ 39 ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಅರ್ಜಿ ಹಾಕಲಾಗಿದೆ. ಆದ್ದರಿಂದ, ಅಲ್ಲಿ ಚುನಾವಣೆ ನಡೆಯುತ್ತಿಲ್ಲ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2 ವಾರ್ಡ್, ತುಮಕೂರು ಮಹಾನಗರ ಪಾಲಿಕೆಯ 22ನೇ ವಾರ್ಡ್, ಹೆಬ್ಬಗೋಡಿ ನಗರಸಭೆ 26 ನೇ ವಾರ್ಡ್, ಸದಲಗ ಪುರಸಭೆ ವಾರ್ಡ್ 19, ಮುಳಗಖೋಡ ಪುರಸಭೆ ವಾರ್ಡ್ 2ಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ಚುನಾವಣಾ ದಿನಾಂಕ, ವೆಚ್ಚದ ವಿವರಗಳು ಚಿತ್ರದಲ್ಲಿವೆ....

Infographics : Urban local bodies election schedule Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+