ಯಡಿಯೂರಪ್ಪ ಸಂಪುಟದಲ್ಲಿ ಯಾವ ಸಚಿವರಿಗೆ ಯಾವ ಖಾತೆ?

ಬೆಂಗಳೂರು, ಆಗಸ್ಟ್ 27: "ಪಕ್ಷ ನಮ್ಮ ಮೇಲೆ ನಂಬಿಕೆಯಿಟ್ಟು ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇವೆ" ಎಂಬ ಅಘೋಷಿತ ವಾಕ್ಯದ ನಡುವೆ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಗೃಹ ಹಂಚಿಕೆ, ವಿಕಾಸಸೌಧ, ವಿಧಾನಸೌಧಗಳಲ್ಲಿ ಕೊಠಡಿ ಹಂಚಿಕೆ ಕಾರ್ಯ ಮುಕ್ತಾಯವಾಗಿದೆ. ಸಚಿವ ಸಂಪುಟದಲ್ಲಿ ಲಿಂಗಾಯತ ಸಚಿವರಿಗೆ ಹೆಚ್ಚಿನ ಆದ್ಯತೆ, ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ, ದಕ್ಷಿಣ ಕನ್ನಡ ಜಿಲ್ಲೆ ಕಡೆಗಣನೆ, ಸಚಿವ ಸ್ಥಾನ ಸಿಗದ ಆಕಾಂಕ್ಷಿಗಳ ಅಸಮಾಧಾನದ ಹೊಗೆ ನಡುವೆ ಖಾತೆ ಹಂಚಿಕೆ ಮುಗಿದಿದೆ. ಯಾವ ಸಚಿವರಿಗೆ ಯಾವ ಖಾತೆ? ಎಂಬುದರ ಸಚಿತ್ರ ಮಾಹಿತಿ ಇಲ್ಲಿದೆ.

ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಮೂರು ಡಾ.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಮತ್ತು ಗೋವಿಂದ ಕಾರಜೋಳಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಕ್ರಮವಾಗಿ ಒಕ್ಕಲಿಗ, ಲಿಂಗಾಯತ ಹಾಗೂ ದಲಿತ ಸಮುದಾಯದ ಓಲೈಕೆ ಇದಾಗಿದೆ. ಆದರೆ, ಹಿಂದುಳಿದ ನಾಯಕರಾಗಿರುವ, ಡಿಸಿಎಂ ಸ್ಥಾನ ಆಕಾಂಕ್ಷಿಗಳಾಗಿದ್ದ ಕೆಎಸ್ ಈಶ್ವರಪ್ಪ ಹಾಗೂ ಬಿ ಶ್ರೀರಾಮುಲುಗೆ ನಿರಾಶೆಯಾಗಿದೆ. ಸಂಪುಟದಲ್ಲಿ ಬಸವರಾಜ ಬೊಮ್ಮಾಯಿ ಬಡ್ತಿ ಸಿಕ್ಕಿದ್ದು ಗೃಹ ಸಚಿವರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಿಂದಲೂ ಮುಂದಿನ ಡಿಸಿಎಂ ಎಂದೇ ಬಿಂಬಿತರಾಗಿದ್ದ ಶ್ರೀರಾಮುಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ.

ಯಡಿಯೂರಪ್ಪ ತಮ್ಮ ಬಳಿ 20ಕ್ಕೂ ಹೆಚ್ಚು ಖಾತೆ ಉಳಿಸಿಕೊಂಡಿದ್ದಾರೆ. ಬಹುಶಃ ಅತೃಪ್ತರಾಗಿ ಅನರ್ಹರಾಗಿ ಮುಂದೆ ಬಿಜೆಪಿ ಸೇರಬಹುದಾದ ಶಾಸಕರಿಗೆ ಈ ಖಾತೆಗಳು ಮೀಸಲಾಗಿಡಲಾಗಿದೆ.

ಇಂಧನ, ಜಲಸಂಪನ್ಮೂಲ, ಕೃಷಿ, ರೇಷ್ಮೆ, ತೋಟಗಾರಿಕೆ, ನಗರಾಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ, ಅರಣ್ಯ, ಸಹಕಾರ, ಅರಣ್ಯ, ಹಿಂದುಳಿದ ವರ್ಗಗಳ ಕಲ್ಯಾಣ, ಪೌರಾಡಳಿತ, ಹಣಕಾಸು, ವೈದ್ಯಕೀಯ ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಮೂಲಸೌಕರ್ಯ, ಆಹಾರ, ಕಾರ್ವಿುಕ, ಕೌಶಲಾಭಿವೃದ್ಧಿ, ಕಾರ್ವಿುಕ, ಅಲ್ಪಸಂಖ್ಯಾತ ಕಲ್ಯಾಣ, ಡಿಪಿಎಆರ್, ಗುಪ್ತವಾರ್ತೆ ಖಾತೆ ಸಿಎಂ ಬಳಿಯಿವೆ. ಉಳಿದಂತೆ ಯಾವ ಸಚಿವರಿಗೆ ಯಾವ ಖಾತೆ ಸಿಕ್ಕಿದೆ ಚಿತ್ರದಲ್ಲಿ ನೋಡಿ...

Infographics: Yediyurappa Cabinet Ministers Portfolios
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+