ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರ ವರದಿ: ಜಿಲ್ಲಾವಾರು ಪಿಯು ರಿಸಲ್ಟ್- ಉಡುಪಿ ನಂ.1, ವಿಜಯಪುರ ಕೊನೆ ಸ್ಥಾನ

|
Google Oneindia Kannada News

ಬೆಂಗಳೂರು, ಜುಲೈ 14: ಕೊರೊನಾವೈರಸ್ ಸೋಂಕಿನಿಂದ ವಿಳಂಬವಾಗಿದ್ದ ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಪ್ರಕಟಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಒಟ್ಟಾರೆ, ಶೇ.69.20 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ: ಟಾಪರ್‌ಗಳ ಪಟ್ಟಿಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ: ಟಾಪರ್‌ಗಳ ಪಟ್ಟಿ

ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಈ ಎರಡು ಜಿಲ್ಲೆಗಳಲ್ಲಿ ಶೇ. 90.75 ರಷ್ಟು ಫಲಿತಾಂಶ ಬಂದಿದೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಪಿಯು ವೆಬ್ ಸೈಟ್
www.pue.kar.nic.in, http://www.karresults.nic.in
ನಲ್ಲಿ ಮಧ್ಯಾಹ್ನ 12ಗಂಟೆ ನಂತರ ಫಲಿತಾಂಶ ಲಭ್ಯವಿರಲಿದೆ.

ಮಾರ್ಚ್ 4 ರಿಂದ 21 ರವರೆಗೆ ಹಾಗೂ ಕೊನೆಯ ಇಂಗ್ಲೀಷ್ ಪರೀಕ್ಷೆಯು ಜೂನ್ 18 ರಂದು ಪರೀಕ್ಷೆಗಳು ನಡೆದಿದ್ದವು. 1016 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸುಮಾರು 70 ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಾಗಿದೆ.

ಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಪ್ರಥಮಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಉಡುಪಿಯ ಅಭಿಜ್ಞಾ ರಾವ್ ರಾಜ್ಯಕ್ಕೆ ಪ್ರಥಮ

ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜಿಲ್ಲಾವಾರು ಪಿಯು ಫಲಿತಾಂಶ 2020: ಚಿತ್ರವಿನ್ಯಾಸ: ಭರತ್ ಎಚ್. ಸಿ

Karnataka 2nd PUC Result 2020: District-wise pass infographics
English summary
Karnataka 2nd puc result 2020: Udupi grabbed the first place and Vijayapura in last place. Here is the district wise list in infographics of PUC results in percentage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X