ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿರು ಮತದಾರರೆಷ್ಟು?
ಕಲಬುರಗಿ, ಮೇ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಾಕಿ ಉಳಿದಿರುವುದು ಇನ್ನು ಕೆಲವೇ ಗಂಟೆಗಳು ಮಾತ್ರ. ಚುನಾವಣೆಗೆ ಬೇಕಾದ ಸರ್ವ ಸಿದ್ಧತೆಗಳನ್ನೂ ಮಾಡಿಕೊಂಡಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ 10,10,735 ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಇವರಲ್ಲಿ 5,05,089 ಪುರುಷ ಮತದಾರರು ಮತ್ತು 5,05,542 ಮಹಿಳಾ ಮತದಾರರಿದ್ದಾರೆ. 104 ತೃತೀಯ ಲಿಂಗಿಗರೂ ಚಿಕ್ಕಬಳ್ಳಾಪುರ ಮತದಾನದ ಹಕ್ಕು ಹೊಂದಿದ್ದಾರೆ.
ಇಲ್ಲಿನ ಚಿಂತಾಮಣಿ ಕ್ಷೇತ್ರದಲ್ಲಿ ಗರಿಷ್ಠ ಅಂದರೆ 2,14,446 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇನ್ನು ಬಾಗೇಪಲ್ಲಿಯಲ್ಲಿ ಕನಿಷ್ಠ 1,97,238 ಮತದಾರರಿದ್ದಾರೆ.
ಭಾರೀ ಕುತೂಹಲ ಕೆರಳಿಸಿರುವ ಬಾಗೇಪಲ್ಲಿ ಕ್ಷೇತ್ರದಲ್ಲಿ 1,97,238 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ಇಲ್ಲಿನ ಗೌರಿ ಬಿದನೂರು, ಬಾಗೇಪಲ್ಲಿ ಮತ್ತು ಚಿಂತಾಮಣಿ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.












Click it and Unblock the Notifications