ಚಿತ್ರದುರ್ಗ ಜಿಲ್ಲೆಯ ಕ್ಷೇತ್ರವಾರು ಮತದಾರರ ಅಂತಿಮ ಸಂಖ್ಯೆ
ಚಿತ್ರದುರ್ಗ, ಮೇ 8: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೇವಲ ಮೂರು ದಿನಗಳಿವೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಆಯೋಗ ನೀಡಿರುವ ಮಾಹಿತಿಗಳ ಪ್ರಕಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ 13,37,940 ಮತದಾರರಿದ್ದಾರೆ. ಇವರಲ್ಲಿ 6,74,851 ಪುರುಷ ಮತದಾರರು ಮತ್ತು 6,62,990ಮಹಿಳಾ ಮತದಾರರಿದ್ದಾರೆ. 99 ತೃತೀಯ ಲಿಂಗಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.
ಇಲ್ಲಿನ ಚಿತ್ರದುರ್ಗ ಕ್ಷೇತ್ರದಲ್ಲಿ ಗರಿಷ್ಠ ಮತದಾರರಿದ್ದು, 2,50,967 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದರೆ, ಹೊಸದುರ್ಗದಲ್ಲಿ ಕನಿಷ್ಠ 1,87,111 ಮತದಾರರಿದ್ದಾರೆ.
ಸಂಸದ ಬಿ. ಶ್ರೀರಾಮುಲು ಸ್ಪರ್ಧೆಯಿಂದ ಕುತೂಹಲ ಕೆರಳಿಸಿರುವ ಮೊಳಕಾಲ್ಮೂರು ಕ್ಷೇತ್ರದಲ್ಲಿ 2,31,116 ಜನರು ತಮ್ಮ ಹಕ್ಕು ಚಲಾಯಿಸಲು ಅರ್ಹತೆ ಪಡೆದುಕೊಂಡಿದ್ದಾರೆ.













Click it and Unblock the Notifications