ವಿರಾಜಪೇಟೆ, ಮಡಿಕೇರಿ ಕ್ಷೇತ್ರಗಳ ಮತದಾರರ ವಿವರ

ಮಡಿಕೇರಿ, ಮೇ 10: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಲು ಇನ್ನೇನು ಕೆಲವು ಗಂಟೆಗಳಷ್ಟೇ ಬಾಕಿ ಉಳಿದಿವೆ. ಚುನಾವಣೆಗೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮುಗಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನೂ ಈಗಾಗಲೇ ಬಿಡುಗಡೆ ಮಾಡಿದೆ.

ಕೊಡಗು ಜಿಲ್ಲೆಯಲ್ಲಿರುವುದು ಎರಡೇ ವಿಧಾನಸಭಾ ಕ್ಷೇತ್ರಗಳು. ಒಂದು ವಿರಾಜಪೇಟೆ, ಇನ್ನೊಂದು ಮಡಿಕೇರಿ. ಈ ಎರಡೂ ಕ್ಷೇತ್ರಗಳಲ್ಲಿ ಒಟ್ಟು 4,33,846 ಮತದಾರರಿದ್ದಾರೆ. ಆಯೋಗ ನೀಡಿರುವ ಮಾಹಿತಿಗಳ ಇವರಲ್ಲಿ 2,16,112 ಪುರುಷ ಮತದಾರರು ಮತ್ತು 2,17,717 ಮಹಿಳಾ ಮತದಾರರಿದ್ದಾರೆ. 17 ತೃತೀಯ ಲಿಂಗಿಗಳೂ ಕೊಡಗಿನಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ.

ವಿಶೇಷವೆಂದರೆ ಇಲ್ಲಿನ ಎರಡೂ ಕ್ಷೇತ್ರಗಳಲ್ಲಿ 2 ಲಕ್ಷಕ್ಕಿಂತ ಹೆಚ್ಚಿನ ಮತದಾರರು ಇದ್ದಾರೆ. ಜೊತೆಗೆ ಮಡಿಕೇರಿ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಮಡಿಕೇರಿ ಕ್ಷೇತ್ರದಲ್ಲಿ 2,16,937 ಜನರು ಮತ ಚಲಾವಣೆಯ ಹಕ್ಕು ಹೊಂದಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ 2,16,909 ಮತದಾರರಿದ್ದಾರೆ.

Karnataka Assembly Elections 2018: Constituency wise voters in Kodagu district
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+